ಸಾರ್ವಜನಿಕ ಕುಂದು ಕೊರತೆ ಕೇಳಲು ಹೊಸ ಟ್ವಿಟರ್ ಖಾತೆ ತೆರೆದ ಸಿಎಂ ಸಿದ್ದರಾಮಯ್ಯ ಕಚೇರಿ

Update: 2023-07-11 06:05 GMT

ಬೆಂಗಳೂರು ಜು 10: ಸಾರ್ವಜನಿಕ ಕುಂದು ಕೊರತೆಗಳನ್ನು ನೇರವಾಗಿ ಮುಖ್ಯಮಂತ್ರಿಗಳ ಕಚೇರಿಯ ಅಧಿಕಾರಿಗಳು ಮತ್ತು ಸಿಬ್ಬಂದಿಯ ಗಮನಕ್ಕೆ ತರಲು ಮಾಧ್ಯಮ ಮತ್ತು ಸಾರ್ವಜನಿಕರಿಗೆ ನೆರವಾಗುವ ಉದ್ದೇಶದಿಂದ ಹೊಸ ಟ್ವಿಟರ್ ಖಾತೆಯನ್ನು ತೆರೆಯಲಾಗಿದೆ.

ಈ ಬಗ್ಗೆ ಮುಖ್ಯಮಂತ್ರಿ ಕಚೇರಿ ಮಾಧ್ಯಮ ಪ್ರಕಟನೆ ಹೊರಡಿಸಿದ್ದು, https://twitter.com/osd_cmkarnataka ಹೆಸರಿನ ಟ್ವಿಟರ್ ಖಾತೆಗೆ ಸಾರ್ವಜನಿಕರು ಮತ್ತು ಮಾಧ್ಯಮದವರು ತಮ್ಮ ಸಾರ್ವಜನಿಕ ಕುಂದು ಕೊರತೆಗಳ ಕುರಿತಾದ ಸಮಸ್ಯೆಗಳನ್ನು ಟ್ಯಾಗ್ ಮಾಡಬಹುದು ಎಂದು ತಿಳಿಸಿದೆ.

ಎಲ್ಲವನ್ನೂ ಕಚೇರಿಯ ಸಿಬ್ಬಂದಿ ಮತ್ತು ಅಧಿಕಾರಿಗಳು ಗಮನಿಸಿ ಸಂಬಂಧಪಟ್ಟ ಅಧಿಕಾರಿಗಳು ಮತ್ತು ಇಲಾಖೆಗಳ ಸಿಬ್ಬಂದಿಯ ಗಮನಕ್ಕೆ ತರುವ ಮೂಲಕ ಪರಿಹಾರ ಕಂಡುಕೊಳ್ಳುವ ಉದ್ದೇಶದಿಂದ ಈ ಪ್ರಯತ್ನ ಮಾಡಲಾಗುತ್ತಿದೆ. ಸಾರ್ವಜನಿಕ ಕುಂದುಕೊರತೆಗಳನ್ನು ಮಾತ್ರ ಮುಖ್ಯಮಂತ್ರಿಗಳ ಕಚೇರಿಯ ಈ ಖಾತೆಗೆ ಟ್ಯಾಗ್ ಮಾಡಬಹುದಾಗಿದ್ದು ವೈಯುಕ್ತಿಕ ಸಮಸ್ಯೆಗಳನ್ನು ಈ ಖಾತೆಗೆ ಟ್ಯಾಗ್ ಮಾಡದೆ ಅವುಗಳನ್ನು ನೇರವಾಗಿ ಸಂಬಂಧಪಟ್ಟವರ ಗಮನಕ್ಕೆ ತರಬಹುದಾಗಿದೆ ಎಂದು ಪ್ರಕಟನೆ ತಿಳಿಸಿದೆ.

Tags:    

Writer - ವಾರ್ತಾಭಾರತಿ

contributor

Editor - Navaz

contributor

Byline - ವಾರ್ತಾಭಾರತಿ

contributor

Similar News