ಹಿರೇಮಗಳೂರು ಕಣ್ಣನ್ ಅವರಿಗೆ ಜಿಲ್ಲಾಡಳಿತ ನೋಟಿಸ್ ನೀಡಿರುವ ಬಗ್ಗೆ ಸಿಎಂ ಪ್ರತಿಕ್ರಿಯಿಸಿದ್ದು ಹೀಗೆ...

Update: 2024-01-24 06:07 GMT

ಚಿಕ್ಕಮಗಳೂರು: ನಗರದ ಹೊರ ವಲಯದಲ್ಲಿರುವ ಕಲ್ಯಾಣ ಕೋದಂಡ ರಾಮ ದೇವಾಲಯದ ಪ್ರಧಾನ ಅರ್ಚಕರಾಗಿ ಸೇವೆ ಸಲ್ಲಿಸುತ್ತಿರುವ ಹಿರೇಮಗಳೂರು ಕಣ್ಣನ್ ಅವರಿಗೆ ಜಿಲ್ಲಾಡಳಿತ ನೋಟಿಸ್ ನೀಡಿರುವ ಬಗ್ಗೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ.

ಈ ಬಗ್ಗೆ ಟ್ವೀಟ್‌ ಮಾಡಿರುವ ಸಿಎಂ ಅವರು, ಹಿರೇಮಗಳೂರು ಕಣ್ಣನ್ ಅವರಿಗೆ ತಸ್ತೀಕ್ ಹಣ ವಾಪಾಸು ನೀಡುವಂತೆ ನೋಟಿಸ್ ನೀಡಿರುವುದರಲ್ಲಿ ತಹಶೀಲ್ದಾರ್ ತಪ್ಪಿದೆ ಹೊರತು ಕಣ್ಣನ್ ಅವರ ತಪ್ಪಿಲ್ಲ. ನೋಟಿಸ್ ಅನ್ನು ಹಿಂಪಡೆಯಲು ಸಂಬಂಧಪಟ್ಟವರ ಜೊತೆ ಮಾತನಾಡುತ್ತೇನೆ. ಕಣ್ಣನ್ ಅವರಿಗೆ ಹೆಚ್ಚುವರಿಯಾಗಿ ಹಣ ಪಾವತಿಸಿರುವುದು ತಹಶೀಲ್ದಾರರು, ಅವರಿಂದಲೇ ಬಾಕಿ ಹಣ ಕಟ್ಟಿಸಿಕೊಳ್ಳುತ್ತೇವೆ ಎಂದಿದ್ದಾರೆ.

ಕನ್ನಡದ ಪೂಜಾರಿ ಎಂದೇ ಖ್ಯಾತಿ ಪಡೆದಿರುವ ಹಿರೇಮಗಳೂರು ಕಣ್ಣನ್ ಅವರ ವೇತನವನ್ನು ತಡೆ ಹಿಡಿದು, 4500 ರೂಪಾಯಿಯಂತೆ 10 ವರ್ಷಕ್ಕೆ 4,74,000 ರೂ. ಹಣವನ್ನು ಸರಕಾರಕ್ಕೆ ವಾಪಸ್ ನೀಡುವಂತೆ ಚಿಕ್ಕಮಗಳೂರು ಜಿಲ್ಲಾಡಳಿತ ನೋಟಿಸ್ ಜಾರಿ ಮಾಡಿತ್ತು.

ರಾಜ್ಯ ಸರ್ಕಾರ ಪ್ರತಿ ತಿಂಗಳು 7500 ರೂ. ವೇತನ ನೀಡುತ್ತಿತ್ತು. ಆದರೆ ಇದೀಗ ದೇವಾಲಯದ ಆದಾಯ ಕಡಿಮೆ ಇದೆ ಎಂಬ ಕಾರಣ ನೀಡಿ ಈ ಹಿಂದೆ ನೀಡಿದ್ದ 7500 ರೂ. ವೇತನದಲ್ಲಿ 4500 ರೂ. ಅನ್ನು ವಾಪಸ್ ನೀಡುವಂತೆ, ಈ ತಿಂಗಳ ವೇತನವನ್ನು ತಡೆ ಹಿಡಿದು ತಹಶಿಲ್ದಾರ್ ಸುಮಂತ್ ನೋಟಿಸ್ ಜಾರಿ ಮಾಡಿದ್ದರು.

Tags:    

Writer - ವಾರ್ತಾಭಾರತಿ

contributor

Editor - jafar sadik

contributor

Byline - ವಾರ್ತಾಭಾರತಿ

contributor

Similar News