ರಾಜ್ಯಪಾಲರ ನಡೆಗೆ ಖಂಡನೆ ; ಸಿಎಂ ಸಿದ್ದರಾಮಯ್ಯಗೆ ನೈತಿಕ ಬೆಂಬಲ ಘೋಷಿಸಿದ ಸ್ವಾಮೀಜಿಗಳು
ಬೆಂಗಳೂರು : ಕೃತಕವಾಗಿ ಸರಕಾರವನ್ನು ಅಸ್ಥಿರಗೊಳಿಸುವ ಕೇಂದ್ರ ಸರಕಾರದ ಮತ್ತು ರಾಜಭವನದ ಷಡ್ಯಂತ್ರಗಳನ್ನು ತೀವ್ರವಾಗಿ ಖಂಡಿಸಿರುವ ಹಿಂದುಳಿದ ವರ್ಗ, ದಲಿತ ಹಾಗೂ ಶೋಷಿತ ಸಮುದಾಯಗಳ ಸ್ವಾಮೀಜಿಗಳ ಒಕ್ಕೂಟ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಬೆಂಬಲ ಘೋಷಣೆ ಮಾಡಿದೆ.
ರವಿವಾರ ಮುಖ್ಯಮಂತ್ರಿ ಅಧಿಕೃತ ನಿವಾಸ ಕಾವೇರಿಯಲ್ಲಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ತಮ್ಮ ಬೇಷರತ್ ನೈತಿಕ ಬೆಂಬಲ ಘೋಷಿಸಿದರು. ಕೃತಕವಾಗಿ ಸರಕಾರ ಅಸ್ಥಿರಗೊಳಿಸುವ ಕೇಂದ್ರ ಸರಕಾರದ ಮತ್ತು ರಾಜಭವನದ ಷಡ್ಯಂತ್ರ ಖಂಡಿನೀಯ ಎಂದ ಸ್ವಾಮೀಜಿಗಳು, ಈ ಷಡ್ಯಂತ್ರದ ವಿರುದ್ಧ ಒಕ್ಕೋರಲಿನಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪರವಾಗಿ ನಿಂತು ಹೋರಾಟ ನಡೆಸುವುದಾಗಿ ಪ್ರಕಟಿಸಿದರು.
ನಿಯೋಗದಲ್ಲಿ ಕಾಗಿನೆಲೆ ಕನಕ ಪೀಠದ ನಿರಂಜನಾನಂದಪುರಿ ಸ್ವಾಮೀಜಿ, ಕುಂಚಿಟಿಗ ಮಹಾ ಸಂಸ್ಥಾನ ಮಠ ಹೊಸದುರ್ಗದ ಶಾಂತವೀರ ಮಹಾಸ್ವಾಮೀಜಿ, ಚಿತ್ರದುರ್ಗ ಭೋವಿ ಗುರುಪೀಠದ ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ, ಚಿತ್ರದುರ್ಗದ ಮಾದರ ಚನ್ನಯ ಗುರುಪೀಠದ ಬಸವಮೂರ್ತಿ ಮಾದರ ಚನ್ನಯ್ಯ, ಮಧುರೆ ಭಗಿರಥ ಪೀಠದ ಪುರುಷೋತ್ತಮಾನಂದಪುರಿ ಸ್ವಾಮೀಜಿ, ಹೊಸದುರ್ಗ ಕನಕ ಗುರುಪೀಠದ ಈಶ್ವರಾನಂದಪುರಿ ಸ್ವಾಮೀಜಿ ಸೇರಿದಂತೆ ಪ್ರಮುಖರಿದ್ದರು.