ಸೀತಾರಾಮ್ ಯಚೂರಿ ನಿಧನ | ಕೋಮುವಾದ ವಿರುದ್ಧದ ಹೋರಾಟಕ್ಕೆ ತುಂಬಲಾರದ ನಷ್ಟ : ಸಿಎಂ ಸಿದ್ದರಾಮಯ್ಯ

Update: 2024-09-12 13:40 GMT

ಸಿದ್ದರಾಮಯ್ಯ/ಸೀತಾರಾಮ್(PC:x/@siddaramaiah)

ಬೆಂಗಳೂರು: ‘ಸಿಪಿಎಂನ ಪ್ರಧಾನ ಕಾರ್ಯದರ್ಶಿ ಸೀತಾರಾಮ್ ಯಚೂರಿ ಅವರ ನಿಧನದಿಂದ ಕೋಮುವಾದ ಮತ್ತು ಬಂಡವಾಳವಾದದ ವಿರುದ್ಧದ ಹೋರಾಟಕ್ಕೆ ತುಂಬಲಾರದ ನಷ್ಟವಾಗಿದೆ. ಯಚೂರಿ ಕುಟುಂಬ ಮತ್ತು ಸಂಗಾತಿಗಳ ದುಃಖದಲ್ಲಿ ನಾನೂ ಭಾಗಿಯಾಗಿದ್ದೇನೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕಂಬನಿ ಮಿಡಿದಿದ್ದಾರೆ.

ಗುರುವಾರ ಎಕ್ಸ್‌ ನಲ್ಲಿ ಪ್ರತಿಕ್ರಿಯೆ ನೀಡಿರುವ ಅವರು, ಸೀತಾರಾಮ್ ಯಚೂರಿ ಅವರ ಸಾವಿನಿಂದ ಆಘಾತಕ್ಕೀಡಾಗಿದ್ದೇನೆ. ಎಡ ಸಿದ್ದಾಂತದ ಪ್ರಖರ ಚಿಂತಕರಾಗಿದ್ದ ಯಚೂರಿ ಅವರು ಅಪ್ಪಟ ಪ್ರಜಾಪ್ರಭುತ್ವವಾದಿಯೂ ಆಗಿದ್ದರು. ಕೋಮುವಾದಿ ರಾಜಕೀಯದ ವಿರುದ್ಧ ಜಾತ್ಯತೀತ ಶಕ್ತಿಗಳ ಒಗ್ಗೂಡಿಸುವಿಕೆಯಲ್ಲಿ ಮುಖ್ಯ ಪಾತ್ರ ವಹಿಸುತ್ತಾ ಬಂದಿರುವ ಯಚೂರಿಯವರು ಕಾಂಗ್ರೆಸ್ ನೇತೃತ್ವದ ಯುಪಿಎ ಸರಕಾರದ ರೂವಾರಿಗಳಲ್ಲೊಬ್ಬರಾಗಿದ್ದರು.

ಆ ಸರಕಾರದ ‘ಸಾಮಾನ್ಯ ಕನಿಷ್ಠ ಕಾರ್ಯಕ್ರಮ' ರಚನೆಯಲ್ಲಿಯೂ ಅವರದ್ದೇ ಪ್ರಧಾನ ಪಾತ್ರ ಇತ್ತು. ಕಳೆದ ವರ್ಷ ನಾನು ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಸಮಾರಂಭಕ್ಕೆ ಆಗಮಿಸಿ, ಶುಭ ಹಾರೈಸಿದ್ದರು. ಈಗಿನ ‘ಇಂಡಿಯಾ' ಒಕ್ಕೂಟ ಸ್ಥಾಪನೆಯಲ್ಲಿಯೂ ಅವರ ಕೊಡುಗೆ ಇದೆ’ ಎಂದು ಸಿದ್ದರಾಮಯ್ಯ ಸ್ಮರಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News