ಲೋಕಾಯುಕ್ತ ತನಿಖೆಗೆ ಕೋರ್ಟ್‌ ಆದೇಶ : ಸಿಎಂ ಸಿದ್ದರಾಮಯ್ಯ ಹೇಳಿದ್ದೇನು?

Update: 2024-09-25 10:11 GMT

ಬೆಂಗಳೂರು: "ನಾವು ತನಿಖೆಯನ್ನು ಎದುರಿಸಲು ತಯಾರಾಗಿದ್ದೇವೆ. ತನಿಖೆಗೆ ಹೆದುರುವುದಿಲ್ಲ ಹಾಗೂ ಕಾನೂನು ರೀತಿ ಹೋರಾಟ ಮಾಡಲು ತಯಾರಾಗಿದ್ದೇವೆ" ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.

ಜನಪ್ರತಿನಿಧಿಗಳ ನ್ಯಾಯಾಲಯದ​ ತೀರ್ಪಿನ ಬಳಿಕ ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, "ಜನಪ್ರತಿನಿಧಿಗಳ ನ್ಯಾಯಾಲಯವು ನಿನ್ನೆಯ ಹೈಕೋರ್ಟ್‌ ಆದೇಶ ನೀಡಿದಂತೆ 17ಎ ಪ್ರಕಾರ ತನಿಖೆ ಮಾಡಲು ಅನುಮತಿ ನೀಡಲಾಗಿದೆ. ಆದೇಶದ ಪ್ರತಿ ನನಗೆ ದೊರೆತಿಲ್ಲ.ಆದೇಶವನ್ನು ಪೂರ್ಣವಾಗಿ ಓದಿದ ನಂತರ ಪ್ರತಿಕ್ರಿಯೆ ನೀಡುವೆ" ಎಂದರು.

ಮೈಸೂರಿಗೆ ಲೋಕಾಯುಕ್ತಕ್ಕೆ ಶಿಫಾರಸು :

"ನನಗೆ ತಿಳಿದಂತೆ ಮೈಸೂರು ಲೋಕಾಯುಕ್ತಕ್ಕೆ ಪ್ರಕರಣವನ್ನು ಶಿಫಾರಸು ಮಾಡಲಾಗಿದೆ. ಮೈಸೂರಿನಲ್ಲಿಯೇ ದೂರು ನೀಡಲಾಗಿದ್ದು, ದೂರುದಾರರು ಮೈಸೂರಿನವರು, ಮುಡಾ ಕೂಡ ಅಲ್ಲಿಯೇ ಇರುವುದರಿಂದ ಮೈಸೂರಿಗೆ ಶಿಫಾರಸು ಮಾಡಿರಬೇಕು ಎಂದು ಭಾವಿಸಿದ್ದೇನೆ” ಎಂದರು.

ಪಿ.ಎನ್.ದೇಸಾಯಿಯವರ ಆಯೋಗದ ತನಿಖೆ ಮುಂದುವರೆಯಲಿದೆ :

ಇಂದಿನ ಪೂರ್ಣ ಆದೇಶ ಸಿಕ್ಕಿದ ಮೇಲೆ ವಕೀಲರೊಂದಿಗೆ ಚರ್ಚೆ ಮಾಡಿ ನಿರ್ಧಾರ ಮಾಡಲಾಗುವುದು. ಮುಡಾ ಪ್ರಕರಣದ ತನಿಖೆಗೆ ಸರಕಾರ ರಚಿಸಿದ್ದ ನಿವೃತ್ತ ನ್ಯಾ.ಪಿ.ಎನ್.ದೇಸಾಯಿಯವರ ಆಯೋಗದ ಮುಂದುವರೆಯಲಿದೆ ಎಂದರು.

Full View

Tags:    

Writer - ವಾರ್ತಾಭಾರತಿ

contributor

Editor - Thouheed

contributor

Byline - ವಾರ್ತಾಭಾರತಿ

contributor

Similar News