ಮುಡಾ ಪ್ರಕರಣದ ನಡುವೆ ರಾಜ್ಯಪಾಲರನ್ನು ಭೇಟಿಯಾದ ಸಿಎಂ ಸಿದ್ದರಾಮಯ್ಯ

Update: 2024-10-09 10:02 GMT

ಬೆಂಗಳೂರು : ಮಾಲ್ಡೀವ್ಸ್ ಗಣರಾಜ್ಯದ ಅಧ್ಯಕ್ಷ ಮುಹಮ್ಮದ್ ಮುಯಿಝ್ಝು ಮತ್ತು ಪ್ರಥಮ ಮಹಿಳೆ ಸಾಜಿದಾ ಮುಹಮ್ಮದ್ ಅವರ ನಿಯೋಗವು ಬೆಂಗಳೂರಿಗೆ ಆಗಮಿಸಿದ ಹಿನ್ನಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜಭವನಕ್ಕೆ ಭೇಟಿ ನೀಡಿದರು.

ಬುಧವಾರ ಹೊಸದಿಲ್ಲಿಯಿಂದ ವಿಶೇಷ ವಿಮಾನದ ಮೂಲಕ ಬೆಂಗಳೂರು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಅಧ್ಯಕ್ಷ ಮುಹಮ್ಮದ್ ಮುಯಿಝ್ಝು ಅವರನ್ನು ರಾಜಭವನಕ್ಕೆ ಕರೆಲಾಯಿತು. 

ಮುಡಾ ಪ್ರಕರಣದಲ್ಲಿ ಸಿಎಂ ವಿರುದ್ಧ ತನಿಖೆಗೆ ಅನುಮತಿ ನೀಡಿದ ಬಳಿಕ ರಾಜಭವನದಿಂದ ದೂರವೇ ಉಳಿದಿದ್ದ ಸಿಎಂ ಸಿದ್ದರಾಮಯ್ಯ ಅವರು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರನ್ನು ಭೇಟಿ ಮಾಡಿದ್ದು ವಿಶೇಷ.

ಅಧ್ಯಕ್ಷ ಮುಹಮ್ಮದ್ ಮುಯಿಝ್ಝು ಭೇಟಿ ಹಿನ್ನಲೆಯಲ್ಲಿ ರಾಜಭವನದಲ್ಲಿ ಔತಣಕೂಟ ಆಯೋಜಿಸಲಾಗಿತ್ತು.

 

 

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News