ಗ್ರಾ.ಪಂ ಸದಸ್ಯರು, ನೌಕರರ ಬೇಡಿಕೆ ಅಧ್ಯಯನಕ್ಕೆ ತಜ್ಞರ ತಂಡ : ಪರಿಶೀಲಿಸಿ ಪ್ರಸ್ತಾವನೆ ಮಂಡಿಸಲು ಸಿಎಂ ಸೂಚನೆ

Update: 2024-10-14 14:21 GMT

ಬೆಂಗಳೂರು : ಗ್ರಾಮ ಪಂಚಾಯತ್ ಸದಸ್ಯರು ಹಾಗೂ ಅಧಿಕಾರಿಗಳು ಮತ್ತು ನೌಕರರ ನ್ಯಾಯಯುತ ಬೇಡಿಕೆಗಳನ್ನು ಅಧ್ಯಯನ ಮಾಡಿ ಸರಕಾರಕ್ಕೆ ವರದಿ ಸಲ್ಲಿಸಲು ತಜ್ಞರ ತಂಡ ರಚಿಸಬೇಕು ಎಂಬ ವಿಧಾನಪರಿಷತ್ ಸದಸ್ಯ ದಿನೇಶ್ ಗೂಳಿಗೌಡ ಮನವಿಗೆ ಸ್ಪಂದಿಸಿರುವ ಸಿಎಂ ಸಿದ್ದರಾಮಯ್ಯ, ಈ ಬಗ್ಗೆ ಪರಿಶೀಲಿಸಿ ಪ್ರಸ್ತಾವನೆ ಮಂಡಿಸುವಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಪ್ರಧಾನ ಕಾರ್ಯದರ್ಶಿಗೆ ಸೂಚಿಸಿದ್ದಾರೆ.

ಗ್ರಾಪಂ ಸದಸ್ಯರು, ಅಧಿಕಾರಿಗಳ ಸಮಸ್ಯೆಗಳ ಕುರಿತು ಸಿಎಂ ಸಿದ್ದರಾಮಯ್ಯ ಹಾಗೂ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಪತ್ರ ಬರೆದಿದ್ದ ದಿನೇಶ್ ಗೂಳಿಗೌಡ, ಅವರ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸುವಂತೆ ಮನವಿ ಮಾಡಿದ್ದರು. ಅಲ್ಲದೆ, ಬೇಡಿಕೆಗಳ ಅಧ್ಯಯನಕ್ಕೆ ತಜ್ಞರ ಸಮಿತಿ ರಚನೆಗೆ ಒತ್ತಾಯಿಸಿದ್ದರು.

ಪಂಚಾಯಿತಿ ಒಕ್ಕೂಟಗಳ ಪದಾಧಿಕಾರಿಗಳ ಸಭೆ ನಡೆಸಿರುವ ಸಚಿವ ಪ್ರಿಯಾಂಕ್ ಖರ್ಗೆ, ಸಮಸ್ಯೆಗಳ ಅಧ್ಯಯನ ಹಾಗೂ ಇತ್ಯರ್ಥಕ್ಕೆ ತಜ್ಞರ ತಂಡವನ್ನು ರಚನೆ ಮಾಡುವುದಾಗಿ ಭರವಸೆ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಗ್ರಾಮ ಪಂಚಾಯಿತಿ ಸದಸ್ಯರು ಹಾಗೂ ನೌಕರರ ಪರವಾಗಿ ಸಿಎಂ ಸಿದ್ದರಾಮಯ್ಯ ಅವರಿಗೆ ಹಾಗೂ ಸಚಿವರಾದ ಪ್ರಿಯಾಂಕ್ ಖರ್ಗೆ ಅವರಿಗೆ ಧನ್ಯವಾದವನ್ನು ಅರ್ಪಿಸುತ್ತೇನೆ ಎಂದು ದಿನೇಶ್ ಗೂಳಿಗೌಡ ಪ್ರಕಟಣೆಯಲ್ಲಿ ಹೇಳಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News