ಚನ್ನಪಟ್ಟಣದ ಸಂಪೂರ್ಣ ಅಭಿವೃದ್ಧಿ ನನ್ನ ಜವಾಬ್ದಾರಿ, ಯೋಗೀಶ್ವರ್‌ರನ್ನು ಗೆಲ್ಲಿಸಿ : ಸಿಎಂ ಸಿದ್ದರಾಮಯ್ಯ ಕರೆ

Update: 2024-10-24 09:13 GMT

ಚನ್ನಪಟ್ಟಣ: "ಚನ್ನಪಟ್ಟಣ ಉಪ ಚುನಾವಣೆ ಫಲಿತಾಂಶ ನಾನೂ ನೋಡ್ತೀನಿ. ಕನಿಷ್ಠ 50 ಸಾವಿರ ಮತಗಳ ಅಂತರದಿಂದ ಕಾಂಗ್ರೆಸ್ ಅಭ್ಯರ್ಥಿ ಯೋಗೀಶ್ವರ್ ಅವರು ಜಯಗಳಿಸಬೇಕು" ಎಂದು ಸಿಎಂ ಸಿದ್ದರಾಮಯ್ಯ ಕರೆ ನೀಡಿದರು.

ಯೋಗೀಶ್ವರ್ ಪರ ರೋಡ್ ಶೋ ನಲ್ಲಿ‌ ಭಾಗವಹಿಸಿ ಮಾತನಾಡಿದ ಅವರು, ʼಯೋಗೀಶ್ವರ್ ಅಭಿವೃದ್ಧಿ ಪರವಾಗಿ ಇರುವುದರಿಂದಲೇ ಐದು ಬಾರಿ ಶಾಸಕರಾಗಿದ್ದಾರೆ. ಈಗ ಅವರು ಕಾಂಗ್ರೆಸ್ಸಿಗೆ ಮರಳಿದ್ದಾರೆ. ಅವರನ್ನು ನಾವೆಲ್ಲಾ ಸ್ವಾಗತಿಸಿದ್ದೇವೆ. ಯೋಗೀಶ್ವರ್ ಗೆಲ್ಲುವ ಮೂಲಕ‌ ಚನ್ನಪಟ್ಟಣದಲ್ಲಿ ನಿಂತು ಹೋಗಿರುವ ಅಭಿವೃದ್ಧಿಗೆ ಮರು ಚಾಲನೆ ನೀಡಿʼ ಎಂದು ಹೇಳಿದರು.

ʼಕುಮಾರಸ್ವಾಮಿಗೆ ಚನ್ನಪಟ್ಟಣ ಮರೆತು ಹೋಗಿ ಮಂಡ್ಯಕ್ಕೆ ಸೀಮಿತರಾಗಿದ್ದಾರೆ. ಬಿಜೆಪಿ ಒಕ್ಕೂಟದಿಂದ ಕುಮಾರಸ್ವಾಮಿಯೇ ನಿಲ್ಲಲಿ, ನಿಖಿಲ್ ಕುಮಾರಸ್ವಾಮಿಯೇ ನಿಲ್ಲಲಿ, ಶ್ರೀಮತಿ ಅನಿತಾ ಕುಮಾರಸ್ವಾಮಿಯವರೇ ನಿಲ್ಲಲಿ. ಇಲ್ಲಿ ಕಾಂಗ್ರೆಸ್ ಪಕ್ಷದ ಯೋಗೀಶ್ವರ್ ಅವರು ಭರ್ಜರಿಯಾಗಿ ಜಯಗಳಿಸುವುದು ಖಚಿತʼ ಎಂದು ಭರವಸೆ ವ್ಯಕ್ತಪಡಿಸಿದರು.

ಡಿಸಿಎಂ ಡಿ.ಕೆ.ಶಿವಕುಮಾರ್, ಸಚಿವರುಗಳಾದ ಬೈರತಿ ಸುರೇಶ್, ಎಂ.ಸಿ.ಸುಧಾಕರ್, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಎಚ್.ಎಂ.ರೇವಣ್ಣ, ಮಾಜಿ ಸಂಸದ ಡಿ.ಕೆ.ಸುರೇಶ್ ಸೇರಿ ಹತ್ತಕ್ಕೂ ಹೆಚ್ಚು ಮಂದಿ ಶಾಸಕರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News