ಜಾತಿ ಗಣತಿ ವರದಿ | ಊಹಾಪೋಹಗಳನ್ನಾಧರಿಸಿ ವಿರೋಧಿಸುವುದು ಅನಾವಶ್ಯಕ : ಸಿಎಂ ಸಿದ್ದರಾಮಯ್ಯ

Update: 2025-01-15 10:34 GMT

ಸಿದ್ದರಾಮಯ್ಯ

ಹೊಸದಿಲ್ಲಿ: ʼಜಾತಿಗಣತಿ ವರದಿಯಲ್ಲಿರುವ ಅಂಕಿ-ಅಂಶ ಇನ್ನೂ ಸಾರ್ವಜನಿಕವಾಗದೇ, ಊಹಾಪೋಹಗಳಾಗಿರುವುದರಿಂದ, ಈ ವಿಚಾರದ ಬಗ್ಗೆ ವಿರೋಧ ಅನಾವಶ್ಯಕ. ನಾಳೆ ನಡೆಯುವ ಸಂಪುಟ ಸಭೆಯಲ್ಲಿ ಜಾತಿ ಗಣತಿ ವರದಿಯ ವಿಷಯವನ್ನು ಮಂಡಿಸಲಾಗುವುದಿಲ್ಲ. ಮುಂದಿನ ಸಂಪುಟ ಸಭೆಯಲ್ಲಿ ವಿಷಯ ಮಂಡಿಸಿ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದುʼ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಹೊಸದಿಲ್ಲಿಯಲ್ಲಿ ಉದ್ಘಾಟನೆಗೆ ಸಿದ್ದವಾಗಿರುವ ಕನ್ನಡ ಭವನದ ನೂತನ ಕಟ್ಟಡವನ್ನು ವೀಕ್ಷಿಸಿದ ನಂತರ ಜಾತಿ ಗಣತಿ ವರದಿಯ ಜಾರಿ ಬಗ್ಗೆ ಉತ್ತರಿಸುತ್ತಾ ಮಾಧ್ಯಮದವರೊಂದಿಗೆ ಮಾತನಾಡಿದರು.

ಮೋಹನ್ ಭಾಗವತ್ ಹೇಳಿಕೆಗೆ ಆಕ್ರೋಶ :

ಆರಸ್ಸೆಸ್‌ ಪ್ರಮುಖ ಮೋಹನ್ ಭಾಗವತ್ ಅವರು ಆಯೋಧ್ಯೆಯ ರಾಮಮಂದಿರ ಪ್ರಾರಂಭವಾದ ದಿನ ದೇಶಕ್ಕೆ ನಿಜ ಅರ್ಥದಲ್ಲಿ ಸ್ವಾತಂತ್ರ್ಯ ಲಭಿಸಿದೆ ಎಂಬ ಹೇಳಿಕೆಗೆ ಪ್ರತಿಕ್ರಿಯೆ ನೀಡಿ, ʼಈ ಬಗ್ಗೆ ರಾಹುಲ್ ಗಾಂಧಿಯವರು ತಮ್ಮ ಭಾಷಣದಲ್ಲಿಯೂ ಪ್ರಸ್ತಾಪಿಸಿದ್ದರು. ಭಾರತ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಭಾಗವಹಿಸದೇ ಆರೆಸ್ಸ್ ಹಾಗೂ ಬಿಜೆಪಿಯವರು ಬ್ರಿಟಿಷರೊಂದಿಗೆ ಶಾಮೀಲಾಗಿದ್ದರು. ಮೋಹನ್ ಭಾಗವತರ ಹೇಳಿಕೆ ಸರಿಯಲ್ಲ ಎಂದರು.

ಕೆಪಿಸಿಸಿ ಅಧ್ಯಕ್ಷರ ಬದಲಾವಣೆ- ವರಿಷ್ಠರ ತೀರ್ಮಾನ ಅಂತಿಮ :

ಸಚಿವ ಸತೀಶ್ ಜಾರಕಿಹೊಳಿ ಕೆಪಿಸಿಸಿ ಅಧ್ಯಕ್ಷ ಬದಲಾಗಬೇಕು ಎಂದು ಅಭಿಪ್ರಾಯಪಟ್ಟಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಈ ಬಗ್ಗೆ ಪಕ್ಷದ ವರಿಷ್ಠರು ತೀರ್ಮಾನ ತೆಗೆದುಕೊಳ್ಳಲಿದ್ದಾರೆ. ಅವರ ತೀರ್ಮಾನವೇ ಅಂತಿಮ ಎಂದು ತಿಳಿಸಿದರು.

ಹಂತ ಹಂತವಾಗಿ ಬಾಕಿ ಪಾವತಿ :

ಕಿಯೋನಿಕ್ಸ್ ಅಸೋಸಿಯೇಷನ್ ‍ಅವರು ಬಾಕಿ ಇರುವ ಬಿಲ್ಲುಗಳು ಪಾವತಿಯಾಗದಿರುವ ಬಗ್ಗೆ ರಾಜ್ಯಪಾಲರಿಗೆ ದೂರು ನೀಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ʼಹಿಂದಿನ ಬಿಜೆಪಿ ಸರಕಾರದವರು ದೊಡ್ಡ ಮೊತ್ತದ ಬಿಲ್ಲುಗಳನ್ನು ಪಾವತಿ ಮಾಡದೇ ಬಾಕಿ ಉಳಿಸಿದ್ದಾರೆ. ಈ ಬಿಲ್ಲುಗಳನ್ನು ಹಂತ ಹಂತವಾಗಿ ಪಾವತಿಸಲು ಕ್ರಮ ಕೈಗೊಳ್ಳಲಾಗುತ್ತಿದೆʼ ಎಂದರು.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News