ಮಂಡಿ ನೋವು: ಸಿಎಂ ಸಿದ್ದರಾಮಯ್ಯ ಆಸ್ಪತ್ರೆಗೆ ದಾಖಲು

Update: 2025-02-02 11:45 IST
ಮಂಡಿ ನೋವು: ಸಿಎಂ  ಸಿದ್ದರಾಮಯ್ಯ ಆಸ್ಪತ್ರೆಗೆ ದಾಖಲು
  • whatsapp icon

ಬೆಂಗಳೂರು: ಎಡಗಾಲಿನ ಮಂಡಿಯಲ್ಲಿ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಣಿಪಾಲ್ ಆಸ್ಪತ್ರೆಯಲ್ಲಿ ತಪಾಸಣೆಗಾಗಿ ದಾಖಲಾಗಿದ್ದಾರೆ.

ತಪಾಸಣೆ ನಡೆಸಿದ ವೈದ್ಯರು ಈ ಹಿಂದೆ ಲೆಗಮೆಂಟ್ ಶಸ್ತ್ರ ಚಿಕಿತ್ಸೆ ನಡೆದ ಜಾಗದ ಮೇಲೆ ಒತ್ತಡ ಬಿದ್ದಿರುವುದರಿಂದ ನೋವು ಕಾಣಿಸಿಕೊಂಡಿದೆ. ಉಳಿದಂತೆ ಯಾವುದೇ ಸಮಸ್ಯೆ ಇಲ್ಲ ಎಂದು ತಿಳಿಸಿದ್ದಾರೆ.

ಎರಡು ದಿನ ಪ್ರಯಾಣ ಮಾಡದೆ ಮನೆಯಲ್ಲೇ ವಿಶ್ರಾಂತಿ ಪಡೆಯುವಂತೆ ವೈದ್ಯರು ಸಲಹೆ ನೀಡಿದ್ದಾರೆ.

ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳ ಚಿಕ್ಕಬಳ್ಳಾಪುರ ಮತ್ತು ರಾಮನಗರ ಜಿಲ್ಲೆಯ ಪ್ರಮುಖ ಕಾರ್ಯಕ್ರಮಗಳ ಸಹಿತ ಇಂದಿನ ಎಲ್ಲ ಕಾರ್ಯಕ್ರಮಗಳನ್ನು ರದ್ದುಗೊಳಿಸಲಾಗಿದೆ.






 


 


Tags:    

Writer - ವಾರ್ತಾಭಾರತಿ

contributor

Editor - jafar sadik

contributor

Byline - ವಾರ್ತಾಭಾರತಿ

contributor

Similar News