ವಾಲ್ಮೀಕಿ ನಿಗಮದ ಅವ್ಯವಹಾರ ಪ್ರಕರಣದಲ್ಲಿ ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ : ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

Update: 2024-06-01 06:51 GMT

ಬೆಂಗಳೂರು: ವಾಲ್ಮೀಕಿ ನಿಗಮದಲ್ಲಿ ಅವ್ಯವಹಾರ ಪ್ರಕರಣದಲ್ಲಿ ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ. ತನಿಖೆಯಲ್ಲಿ ತಪ್ಪಿತಸ್ಥರು ಎಂದು ಗೊತ್ತಾದರೆ, ಎಲ್ಲರ ವಿರುದ್ದವೂ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು.

ಸಿಟಿ ಸಿವಿಲ್ ಕೋರ್ಟ್ ಆವರಣದಲ್ಲಿ ಸುದ್ದಿಗಾರೊಂದಿಗೆ ಮಾತನಾಡಿದ ಅವರು, ವಾಲ್ಮೀಕಿ ನಿಗಮದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಎಸ್‌ಐಟಿ ರಚಿಸಲಾಗಿದ್ದು, ತನಿಖೆ ಚುರುಕಾಗಿ ನಡೆಯುತ್ತಿದೆ. ತಪ್ಪಿತಸ್ಥರನ್ನು ರಕ್ಷಿಸುವ ಪ್ರಶ್ನೆಯೇ ಇಲ್ಲ ಎಂದರು.

ನಾವು ಕಾನೂನು ಪಾಲಕರು :

ಬಿಜೆಪಿಯವರು ದಾಖಲಿಸಿದ್ದ ಖಾಸಗಿ ದೂರಿನ ಸಂಬಂಧ ನ್ಯಾಯಾಲಯಕ್ಕೆ ಹಾಜರಾಗಿದ್ದ ಮುಖ್ಯಮಂತ್ರಿಗಳು ಈ ಬಗ್ಗೆ ಪ್ರತಿಕ್ರಿಯಿಸಿ, "ಸಿವಿಲ್ ಸ್ವರೂಪದ ಪ್ರಕರಣ ಇದಾಗಿದೆ. ಕಾನೂನು ರಕ್ಷಕರಾಗಿ, ಪಾಲಕರಾಗಿ ನ್ಯಾಯಾಲಯದ ಸೂಚನೆ ಮೇರೆಗೆ ಇಂದು ನಾನು ನ್ಯಾಯಾಧೀಶರ ಮುಂದೆ ಹಾಜರಾಗಿದ್ದೇನೆ. ಜಾಮೀನು ಪಡೆದಿದ್ದೇನೆ" ಎಂದರು.

ಡಿಸಿಎಂ ಡಿ.ಕೆ.ಶಿವಕುಮಾರ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News