ವಕ್ಫ್‌ ಆಸ್ತಿ ವಿವಾದ | ಯಾವ ರೈತರನ್ನೂ ಒಕ್ಕಲೆಬ್ಬಿಸುವುದಿಲ್ಲ, ನೋಟಿಸ್ ನೀಡಿದ್ದರೆ ವಾಪಸ್ ಪಡೆಯಲಾಗುವುದು : ಸಿಎಂ ಸಿದ್ದರಾಮಯ್ಯ

Update: 2024-10-29 10:19 GMT

ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು : "ಯಾವ ರೈತರನ್ನೂ ತಮ್ಮ ಜಮೀನುಗಳಿಂದ ಒಕ್ಕಲೆಬ್ಬಿಸುವುದಿಲ್ಲ. ಅಲ್ಲದೆ, ರೈತರಿಗೆ ನೋಟಿಸ್ ನೀಡಲಾಗಿದ್ದರೆ, ಅದನ್ನು ವಾಪಸ್ ಪಡೆಯಲಾಗುವುದು" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ವಿಜಯಪುರ, ಯಾದಗಿರಿ ಹಾಗೂ ಧಾರವಾಡ ಜಿಲ್ಲೆಗಳಲ್ಲಿ ವಕ್ಫ್ ಆಸ್ತಿ ಎಂದು ರೈತರಿಗೆ ನೋಟಿಸ್ ನೀಡಿರುವ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಅವರು ಪ್ರತಿಕ್ರಿಯೆ ನೀಡಿದರು.

ಕಂದಾಯಸಚಿವ ಕೃಷ್ಣಬೈರೇಗೌಡ, ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ್, ವಕ್ಫ್ ಸಚಿವ ಜಮೀರ್ ಅಹ್ಮದ್ ಅವರು ನಿನ್ನೆ ಜಂಟಿ ಪತ್ರಿಕಾಗೋಷ್ಠಿಯನ್ನು ನಡೆಸಿ ಈ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ ಎಂದು ತಿಳಿಸಿದರು.

ನೇಮಕಾತಿ ಅಧಿಸೂಚನೆಯನ್ನು ಹೊರಡಿಸುವುದಿಲ್ಲ :

ನಿನ್ನೆ ನಡೆದ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಜಾರಿಗೊಳಿಸಲು ಸರ್ಕಾರ ತೀರ್ಮಾನಿಸಿದೆ. ಈ ನಿಟ್ಟಿನಲ್ಲಿ ಹೈಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ನೇತೃತ್ವದ ಏಕ ಸದಸ್ಯ ಆಯೋಗ ರಚಿಸಲು ತೀರ್ಮಾನಿಸಲಾಗಿದ್ದು, ಒಳಮೀಸಲಾತಿ ಜಾರಿ ಬಗ್ಗೆ ಪರಾಮರ್ಶೆ ನಡೆಸಿ ವರದಿ ನೀಡಲು ಮೂರು ತಿಂಗಳ ಅವಧಿ ನೀಡಲಾಗುವುದು. ಈಗಾಗಲೇ ನೇಮಕಾತಿಗೆ ಮಾಡಿರುವ ಅಧಿಸೂಚನೆಗಳನ್ನು ಹೊರತುಪಡಿಸಿ, ಏಕ ಸದಸ್ಯ ಸದಸ್ಯಆಯೋಗದ ವರದಿ ಬರುವವರೆಗೆ ಸರಕಾರಿ ನೇಮಕಾತಿಯ ಅಧಿಸೂಚನೆಯನ್ನು ಹೊರಡಿಸುವುದಿಲ್ಲ ಎಂದು ತಿಳಿಸಿದರು.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News