ಟಿ20 ವಿಶ್ವಕಪ್ ಗೆದ್ದ ಭಾರತ ತಂಡವನ್ನು ಅಭಿನಂದಿಸಿದ ಸಿಎಂ ಸಿದ್ದರಾಮಯ್ಯ

Update: 2024-06-29 19:06 GMT

Photo : x/@ESPNcricinfo

ಬೆಂಗಳೂರು : ನಿರ್ಣಾಯಕ ಹಂತದಲ್ಲಿ ಭಾರತ ತಂಡ ತೋರಿದ ಸಂಘಟಿತ ಪ್ರದರ್ಶನ ಪಂದ್ಯದ ದಿಕ್ಕನ್ನೇ ಬದಲಿಸಿತು. ಇಡೀ ಪಂದ್ಯಾವಳಿಯಲ್ಲಿ ಒಂದು ಪಂದ್ಯವನ್ನೂ ಸೋಲದೆ ಅಜೇಯರಾಗುಳಿದು, ಟಿ20 ವಿಶ್ವಕಪ್ ಜಯಿಸಿದ ಭಾರತ ತಂಡದ ಸಾಧನೆ ನಿಜಕ್ಕೂ ಶ್ಲಾಘನೀಯ ಎಂದು ಸಿಎಂ ಸಿದ್ದರಾಮಯ್ಯನವರು ವಿಶ್ವಕಪ್ ವಿಜೇತ ಭಾರತ ತಂಡಕ್ಕೆ ಅಭಿನಂದನೆ ಸಲ್ಲಿಸಿದ್ದಾರೆ.

ಈ ಸಂಬಂಧ ಎಕ್ಸ್‌ ನಲ್ಲಿ ನಲ್ಲಿ ಪೋಸ್ಟ್‌ವೊಂದನ್ನು ಹಂಚಿಕೊಂಡಿರುವ ಸಿಎಂ ಸಿದ್ದರಾಮಯಯ್ಯ, ದಕ್ಷಿಣ ಆಫ್ರಿಕಾ ವಿರುದ್ಧದ ಭಾರತದ ಗೆಲುವುನ್ನು ಸಂಭ್ರಮಿಸಿದ್ದಾರೆ.

"ಒಂದು ಹಂತದಲ್ಲಿ ಗೆಲುವಿನ ಸನಿಹಕ್ಕೆ ಬಂದು ಕಡೇ ಕ್ಷಣದಲ್ಲಿ ಪಂದ್ಯ ಸೋತಿರುವ ದಕ್ಷಿಣ ಆಫ್ರಿಕಾ ತಂಡದ ಆಟವೂ ಮೆಚ್ಚತಕ್ಕದ್ದೆ. ಇದೊಂದು ಐತಿಹಾಸಿಕ ಕ್ಷಣ. ಕ್ರಿಕೆಟ್ ಪ್ರೇಮಿಯಾದ ನನಗೆ ನಮ್ಮವರ ಗೆಲುವು ಅತ್ಯಂತ ಖುಷಿಕೊಟ್ಟಿದೆ. ಕೋಟ್ಯಂತರ ಜನರ ಹರಕೆ, ಹಾರೈಕೆಗಳು ಕಡೆಗೂ ಫಲಕೊಟ್ಟಿದೆ, ವಿಶ್ವಕಪ್ ಮರಳಿ ಭಾರತದ ಮಡಿಲು ಸೇರಿದೆ" ಎಂದು ಸಿಎಂ ಸಿದ್ದರಾಮಯ್ಯ ಬರೆದುಕೊಂಡಿಸದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News