IBSA ವರ್ಲ್ಡ್ ಗೇಮ್ಸ್ | ಚಿನ್ನದ ಪದಕ ಗೆದ್ದ ಭಾರತೀಯ ಮಹಿಳಾ ಅಂಧರ ಕ್ರಿಕೆಟ್ ತಂಡವನ್ನು ಅಭಿನಂದಿಸಿದ ಸಿಎಂ ಸಿದ್ದರಾಮಯ್ಯ
ಬೆಂಗಳೂರು: ಐ.ಬಿ.ಎಸ್.ಎ ಅಂತಾರಾಷ್ಟ್ರೀಯ ಕ್ರಿಕೆಟ್ ಪಂದ್ಯಾವಳಿಯಲ್ಲಿ ( ಕ್ರಿಕೆಟ್ ಫಾರ್ ಬ್ಲೈಂಡ್ ) ಪಾಲ್ಗೊಂಡು ಚಿನ್ನದ ಪದಕ ಗೆದ್ದಿರುವ ಭಾರತೀಯ ಮಹಿಳಾ ಅಂಧರ ಕ್ರಿಕೆಟ್ ತಂಡದ ಸದಸ್ಯರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ಅಭಿನಂದಿಸಿದ್ದಾರೆ.
ತಂಡದ ನಾಯಕಿ ವರ್ಷಾ.ಯು ಹಾಗೂ ತಂಡದ ಆಟಗಾರರಾದ, ದೀಪಿಕಾ, ಗಂಗವ್ವ ನೀಲಪ್ಪ ಮತ್ತು ರಜತ ಪದಕ ಗೆದ್ದಿರುವ ಪುರುಷರ ಕ್ರಿಕೆಟ್ ತಂಡದ ಕರ್ನಾಟಕದ ಆಟಗಾರರಾದ ಪ್ರಕಾಶ್ ಜೆ, ಸುನೀಲ್ ಕುಮಾರ್, ಬಸಪ್ಪ ಒಡ್ಡಗೋಲ್ ಅವರನ್ನು ಮುಖ್ಯಮಂತ್ರಿಗಳು ಸನ್ಮಾನಿಸಿದರು.
ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಒಲಂಪಿಕ್ ಸಂಸ್ಥೆ ಅಧ್ಯಕ್ಷರು, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಗಳೂ ಆದ ಕೆ. ಗೋವಿಂದ ರಾಜು, ನಸೀರ್ ಅಹಮದ್, ಕ್ರಿಕೆಟ್ ಅಸೋಸಿಯೇಷನ್ ಫಾರ್ ಬ್ಲೈಂಡ್ ಇಂಡಿಯಾದ ಆಜೀವ ಅಧ್ಯಕ್ಷರಾದ ಮಹಾಂತೇಶ್, ಕ್ಯಾಬಿ ಅಧ್ಯಕ್ಷರಾದ ಬೂಸಾಗೌಡ, ಸಮರ್ಥನಂ ಟ್ರಸ್ಟ್ ನ ಪ್ರತಿನಿಧಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಮಹಿಳಾ ಕ್ರಿಕೆಟಿಗರ ಪೈಕಿ ಹಾವೇರಿ ಜಿಲ್ಲೆಯ ಶಿಗ್ಗಾವಿ ತಾಲೂಕಿನ ಶಿಸುವಿನಾಳ ಗ್ರಾಮದ ಗಂಗವ್ವ ನೀಲಪ್ಪ ಅವರ ಬಗ್ಗೆ ʼವಾರ್ತಾ ಭಾರತಿʼ ಡಿಜಿಟಲ್ ಚಾನಲ್ ವಿಶೇಷ ವೀಡಿಯೊ ವರದಿ ಮಾಡಿ ನಾಡಿನ ಗಮನ ಸೆಳೆದಿತ್ತು. ಆ ವಿಶೇಷ ವರದಿಯನ್ನು ಫೇಸ್ ಬುಕ್ ನಲ್ಲಿ17 ಲಕ್ಷಕ್ಕೂ ಅಧಿಕ ಮಂದಿ ವೀಕ್ಷಿಸಿದ್ದು, ಒಂದು ಲಕ್ಷದ ಇಪ್ಪತ್ತ ಮೂರು ಸಾವಿರಕ್ಕೂ ಅಧಿಕ ಮಂದಿ ಲೈಕ್ ಮಾಡಿದ್ದರು. ಹಲವರು ಗಂಗವ್ವಗೆ ನೆರವು ನೀಡಲು ಮುಂದೆ ಬಂದಿದ್ದರು. ಇದೀಗ ರಾಜ್ಯದ ಮುಖ್ಯಮಂತ್ರಿ ಗಳು ಗಂಗವ್ವ ಹಾಗೂ ಇತರ ಆಟಗಾರರನ್ನು ಸನ್ಮಾನಿಸಿದ್ದಾರೆ.
ಆ ವಿಶೇಷ ವರದಿಯ ವೀಡಿಯೊ ಇಲ್ಲಿದೆ :
ಐ.ಬಿ.ಎಸ್.ಎ ಅಂತಾರಾಷ್ಟ್ರೀಯ ಕ್ರಿಕೆಟ್ ಪಂದ್ಯಾವಳಿಯಲ್ಲಿ ( ಕ್ರಿಕೆಟ್ ಫಾರ್ ಬ್ಲೈಂಡ್ ) ಪಾಲ್ಗೊಂಡು ಚಿನ್ನದ ಪದಕ ಗೆದ್ದಿರುವ ಭಾರತೀಯ ಮಹಿಳಾ ಅಂಧರ ಕ್ರಿಕೆಟ್ ತಂಡದ ನಾಯಕಿ ಕನ್ನಡತಿ ವರ್ಷಾ. ಯು ಹಾಗೂ ತಂಡದ ಆಟಗಾರರಾದ, ದೀಪಿಕಾ, ಗಂಗವ್ವ ಹಾಗೂ ರಜತ ಪದಕ ಗೆದ್ದಿರುವ ಪುರುಷರ ಕ್ರಿಕೆಟ್ ತಂಡದ ಕರ್ನಾಟಕದ ಆಟಗಾರರಾದ ಪ್ರಕಾಶ್ ಜೆ, ಸುನೀಲ್… pic.twitter.com/bXJzj3FftZ
— CM of Karnataka (@CMofKarnataka) September 29, 2023