ರನ್ನ ಸಕ್ಕರೆ ಕಾರ್ಖಾನೆ ಪುನಶ್ಚೇತನಕ್ಕೆ ಟೆಂಡರ್ ಕರೆಯಲು ಸಿಎಂ ಸಿದ್ದರಾಮಯ್ಯ ಸೂಚನೆ

Update: 2023-09-28 17:16 GMT

ಬೆಂಗಳೂರು, ಸೆ.28: ರನ್ನ ಸಹಕಾರಿ ಸಕ್ಕರೆ ಕಾರ್ಖಾನೆಯನ್ನು ಪುನಶ್ಚೇತನಗೊಳಿಸಲು ಅಲ್ಪಾವಧಿ ಟೆಂಡರ್ ಕರೆಯಲು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.

ಶುಕ್ರವಾರ ಮುಧೋಳ ತಾಲೂಕಿನ ರನ್ನ ಸಹಕಾರಿ ಸಕ್ಕರೆ ಕಾರ್ಖಾನೆಯಲ್ಲಿ 2023- 24 ನೆ ಸಾಲಿಗೆ ಕಬ್ಬು ಅರೆಯುವ ಕಾರ್ಯವನ್ನು ಲೀಸ್ ಮೂಲಕ ಪುನರಾರಂಭಿಸುವ ಕುರಿತು ನಡೆದ ಸಭೆಯಲ್ಲಿ ಮಾತನಾಡಿದರು.

ಕಬ್ಬು ಅರೆಯುವ ಕಾರ್ಯ ಪ್ರಾರಂಭವಾಗಬೇಕು. ಪುನಶ್ಚೇತನದಿಂದ ರೈತರಿಗೂ ಅನುಕೂಲ ವಾಗಬೇಕು. ಅಲ್ಪಮಟ್ಟದ ಹೂಡಿಕೆಗೆ ಸಿದ್ಧವಿರುವ ಸಂಸ್ಥೆಗಳು ಟೆಂಡರ್ ನಲ್ಲಿ ಪಾಲ್ಗೊಳ್ಳುವಂತಾಗಬೇಕು ಎಂದರು.

ಜವಳಿ, ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಸಚಿವ ಶಿವಾನಂದ ಪಾಟೀಲ್, ಆರ್ಥಿಕ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ.ಅತೀಕ್, ಕಾನೂನು, ನ್ಯಾಯ ಮತ್ತು ಮಾನವ ಹಕ್ಕುಗಳ ಇಲಾಖೆ ಪ್ರಧಾನ ಕಾರ್ಯದರ್ಶಿ ಪ್ರಭಾವತಿ ಹಿರೇಮಠ್, ಸಹಕಾರ ಇಲಾಖೆ ಪ್ರಧಾನ ಕಾರ್ಯದರ್ಶಿ ಎನ್.ಮಂಜುನಾಥ್ ಪ್ರಸಾದ್, ಕಬ್ಬು ಅಭಿವೃದ್ಧಿ ಹಾಗೂ ಸಕ್ಕರೆ ಆಯುಕ್ತ ರವಿಕುಮಾರ್, ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆ ಕಾರ್ಯದರ್ಶಿ ಹಾಗೂ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - Navaz

contributor

Byline - ವಾರ್ತಾಭಾರತಿ

contributor

Similar News