ನಾಳೆ (ಡಿ.19) ಪ್ರಧಾನಿ ಮೋದಿ ಭೇಟಿಯಾಗಲಿರುವ ಸಿಎಂ ಸಿದ್ದರಾಮಯ್ಯ

Update: 2023-12-18 07:20 GMT

File Photo: PTI

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ನಾಳೆ (ಡಿ.19)  ಪ್ರಧಾನಿ ನರೇಂದ್ರ ಮೋದಿ ಬೇಟಿಯಾಗಲು ಅವಕಾಶ ನೀಡಲಾಗಿದೆ. ಬೆಳಗ್ಗೆ‌ 11.30ಕ್ಕೆ ಮುಖ್ಯಮಂತ್ರಿಗಳು ಸಂಸತ್​ ಭವನದಲ್ಲಿ ಪ್ರಧಾನಿ  ಭೇಟಿಯಾಗಿ ರಾಜ್ಯದ  ಬರ ಪರಿಸ್ಥಿತಿಗಳ ಕುರಿತು ಚರ್ಚಿಸಲಿದ್ದಾರೆ.

ಇತ್ತೀಚೆಗೆ ಪ್ರಧಾನಿ ಮೋದಿ, ಗೃಹ ಸಚಿವ ಅಮಿತ್‌ ಶಾ ಹಾಗೂ ಕೃಷಿ ಸಚಿವರ ಬೇಟಿಗೆ ಸಿಎಂ ಸಿದ್ದರಾಮಯ್ಯ ನಾಲ್ಕು ಬಾರಿ ಪತ್ರ ಬರೆದು ಮನವಿ ಮಾಡಿದ್ದರು, ಕೊನೆಗೂ ಪ್ರಧಾನಿ ನರೇಂದ್ರ ಮೋದಿ ಭೇಟಿಗೆ  ಸಮಯಾವಕಾಶ ನೀಡಿದ್ದಾರೆ.

 ಬೆಳಗಾವಿಯಲ್ಲಿ ನಡೆದ ಚಳಿಗಾಲದ ಅಧಿವೇಶನದಲ್ಲೂ ಬರದ ಬಗ್ಗೆ ಚರ್ಚಿಸಲು ಪ್ರಧಾನಿ ಮೋದಿ ಭೆಟಿಗೆ ಅವಕಾಶ ನೀಡಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಅಸಮಾಧಾನ ವ್ಯಕ್ತಪಡಿಸಿದ್ದರು. 

ನಾಲ್ಕು ದಿನಗಳ ಕಾಲ ದೆಹಲಿ ಪ್ರವಾಸ ಕೈಗೊಳ್ಳಲಿರುವ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ರಾಜ್ಯದಲ್ಲಿನ ಬರಗಾಲದ ಕುರಿತು ಚರ್ಚಿಸಿ,  ಬರ ಪರಿಹಾರವನ್ನು ಕೂಡಲೇ ಬಿಡುಗಡೆ ಮಾಡುವಂತೆ ಒತ್ತಾಯಿಸುವ ಸಾಧ್ಯತೆ ಇದೆ. ನರೇಗಾ ಯೋಜನೆಯಡಿ ಮಾನವ ಸಂಪನ್ಮೂಲ ಹೆಚ್ಚಿಸುವುದು ಸೇರಿದಂತೆ,ಜಿಎಸ್ಟಿ ಬಾಕಿ, ಕೇಂದ್ರದ ಸಹಾಯಾನುದಾನಗಳು, ಕೇಂದ್ರ ಪುರಸ್ಕೃತ ಯೋಜನೆಗಳ ಅನುದಾನ ಕಡಿತದ ಬಗ್ಗೆ ಚರ್ಚಿಸುವ ಸಾಧ್ಯತೆ ಇದೆ. 

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News