ಗಣರಾಜ್ಯೋತ್ಸವ ಪರೇಡ್‌ನಲ್ಲಿ ಕರ್ನಾಟಕದ ಸ್ತಬ್ಧಚಿತ್ರ ಸೇರಿಸುವಂತೆ ರಕ್ಷಣಾ ಸಚಿವರಿಗೆ ಸಿಎಂ ಸಿದ್ದರಾಮಯ್ಯ ಪತ್ರ

Update: 2024-01-11 12:52 GMT

ಬೆಂಗಳೂರು: ಕರ್ನಾಟಕದ ಸ್ತಬ್ಧಚಿತ್ರವನ್ನು ಗಣರಾಜ್ಯೋತ್ಸವ ಪರೇಡ್‌ನಲ್ಲಿ  ಸೇರಿಸಲು ವಿನಂತಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗುರುವಾರ ರಕ್ಷಣಾ ಸಚಿವ ರಾಜ್ ನಾಥ್ ಸಿಂಗ್ ಅವರಿಗೆ ಪತ್ರ ಬರೆದಿದ್ದಾರೆ.

ಈ ಕುರಿತು ʼಎಕ್ಸ್‌ʼ ನಲ್ಲಿ ಪೋಸ್ಟ್‌ ವೊಂದನ್ನು ಅವರು, ”ನಾನು ರಕ್ಷಣ ಸಚಿವ ರಾಜ್ ನಾಥ್ ಸಿಂಗ್ ಅವರಿಗೆ ಗಣರಾಜ್ಯೋತ್ಸವ ಪರೇಡ್‌ನಲ್ಲಿ ಕರ್ನಾಟಕದ ಸ್ತಬ್ಧಚಿತ್ರವನ್ನು ಸೇರಿಸಲು ವಿನಂತಿಸಿ ಪತ್ರ ಬರೆದಿದ್ದೇನೆ. 7 ಕೋಟಿ ಕನ್ನಡಿಗರ ಆಳವಾದ ಭಾವನೆಯನ್ನು ವ್ಯಕ್ತಪಡಿಸಿದ್ದೇನೆ. ಗಣರಾಜ್ಯೋತ್ಸವ ಪರೇಡ್‌ನಲ್ಲಿ ಕರ್ನಾಟಕದ ಸ್ತಬ್ಧಚಿತ್ರವನ್ನು ನಿರಾಕರಿಸುವುದು ಕೇವಲ ಪ್ರಮಾದವಲ್ಲ. ಇದು ನಮ್ಮ ರಾಜ್ಯದ ಹೆಮ್ಮೆಗೆ ಧಕ್ಕೆಯಾಗಿದೆ. ನಮ್ಮ ಸಾಧನೆಗಳು ರಾಷ್ಟ್ರೀಯ ವೇದಿಕೆಗೆ ಅರ್ಹವಾಗಿವೆ” ಎಂದು ಬರೆದಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News