ಡಿ.9ರವರೆಗೆ ರಾಜ್ಯಾದ್ಯಂತ ಚಳಿ ವಾತಾವರಣ: ಹವಾಮಾನ ಇಲಾಖೆ

Update: 2023-12-06 12:47 GMT

ಸಾಂದರ್ಭಿಕ ಚಿತ್ರ

ಬೆಂಗಳೂರು, ಡಿ.6: ಮಿಚಾಂಗ್ ಚಂಡಮಾರುತ ತಮಿಳುನಾಡು ಮತ್ತು ಕರಾವಳಿ ತೀರ ಪ್ರದೇಶದಲ್ಲಿ ಅಬ್ಬರಿಸುತ್ತಿರುವ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಡಿ.9ರ ತನಕ ಚಳಿಯ ವಾತಾವರಣ ಇರಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.

ರಾಜಧಾನಿ ಬೆಂಗಳೂರಿನಲ್ಲಿ ಒಂದೆರಡು ದಿನ ಕಾಲ ಶೀತದ ವಾತಾವರಣ ಇರಲಿದೆ. ಹೀಗಾಗಿ, ರಾಜ್ಯದ ಜನರು ಡಿ.9ರವರೆಗೂ ಬೆಚ್ಚನೆಯ ವಾತಾವರಣ ಕಾಪಾಡಿಕೊಳ್ಳುವಂತೆ ಸೂಚನೆ ನೀಡಿದೆ. ದಕ್ಷಿಣ ಒಳನಾಡಿನ ಪ್ರದೇಶಗಳಲ್ಲಿ ಡಿ.7ರಿಂದ ಡಿ.9ರತನಕ ಹಲವು ಭಾಗಗಳಲ್ಲಿ ಮಳೆಯಾಗಬಹುದು. ಬೀದರ್, ಕಲಬುರಗಿ ಮತ್ತು ಯಾದಗಿರಿ ಜಿಲ್ಲೆಗಳಂತಹ ಉತ್ತರ ಒಳನಾಡಿನ ಪ್ರದೇಶಗಳಲ್ಲಿ ಸ್ವಲ್ಪ ಮಳೆಯಾಗುವ ಸಾಧ್ಯತೆಯಿದೆ ಎಂದು ಮುನ್ಸೂಚನೆ ನೀಡಿದೆ.

ಕರಾವಳಿ ಪ್ರದೇಶಗಳಲ್ಲಿ ಡಿ.9 ರಂದು ದಕ್ಷಿಣ ಕನ್ನಡ ಮತ್ತು ಉಡುಪಿಯಲ್ಲಿ ಮಳೆಯಾಗುವ ನಿರೀಕ್ಷೆಯಿದೆ. ಹೀಗಾಗಿ, ಎಚ್ಚರಿಕೆ ವಹಿಸುವುದು ಅಗತ್ಯವಾಗಿದೆ ಎಂದಿದ್ದಾರೆ. ತಮಿಳುನಾಡಿನಲ್ಲಿ ಮಳೆಯ ಅಬ್ಬರದಿಂದಾಗಿ ಬೆಂಗಳೂರನ್ನೂ ಕೊಂಚಮಟ್ಟಿಗೆ ಕಾಡಲಿದೆ. ಈಗಾಗಲೇ ಕಳೆದ ಕೆಲವು ದಿನಗಳಿಂದ ರಾಜ್ಯ ರಾಜಧಾನಿಯಲ್ಲಿ ಇಡೀ ದಿನ ಮೋಡ ಕವಿದ ವಾತಾವರಣ ನಿರ್ಮಾಣವಾಗಿದೆ.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News