ಸರಕಾರ ವಜಾಕ್ಕೆ ಆಗ್ರಹಿಸಿ ರಾಜ್ಯಪಾಲರಿಗೆ ಬಿಜೆಪಿಯಿಂದ ದೂರು

Update: 2024-03-01 06:18 GMT

Photo : @RAshokaBJP

ಬೆಂಗಳೂರು : ಕಾನೂನು-ಸುವ್ಯವಸ್ಥೆ ಸಂಪೂರ್ಣ ಕುಸಿದು ಬಿದ್ದಿರುವ ಹಿನ್ನೆಲೆಯಲ್ಲಿ ರಾಜ್ಯ ಸರಕಾರವನ್ನು ವಜಾಗೊಳಿಸಿ, ಕೂಡಲೇ ರಾಷ್ಟ್ರಪತಿ ಆಡಳಿತ ಜಾರಿ ಮಾಡಬೆಕು ಎಂದು ಕೋರಿ ಪ್ರತಿಪಕ್ಷ ಬಿಜೆಪಿ, ರಾಜ್ಯಪಾಲರಿಗೆ ದೂರು ನೀಡಿದೆ.

ಗುರುವಾರ ರಾಜ್ಯಪಾಲ ಥಾವರ್  ಚಂದ್ ಗೆಹ್ಲೋಟ್ ಅವರು ಪ್ರವಾಸದಲ್ಲಿರುವ ಕಾರಣ ಉಭಯ ಸದನಗಳ ಪ್ರತಿಪಕ್ಷ ನಾಯಕರಾದ ಆರ್.ಅಶೋಕ್, ಕೋಟ ಶ್ರೀನಿವಾಸ ಪೂಜಾರಿ ಸೇರಿದಂತೆ ಇನ್ನಿತರ ಮುಖಂಡರು ರಾಜ್ಯಪಾಲರ ಕಾರ್ಯದರ್ಶಿಗೆ ದೂರು ಸಲ್ಲಿಸಿದರು.

ಬಳಿಕ ಮಾತನಾಡಿದ ವಿಪಕ್ಷ ನಾಯಕ ಆರ್.ಅಶೋಕ್, ‘ಸರಕಾರವನ್ನು ವಜಾ ಮಾಡಿ ಎಂದು ಮನವಿ ನೀಡಿದ್ದೇವೆ. ಕಾಂಗ್ರೆಸ್ ಸರಕಾರದಲ್ಲಿ ಭಯೋತ್ಪಾದನಾ ಚಟುವಟಿಕೆ ಆರಂಭವಾಗಿದೆ. ಗಲಾಟೆ, ಗಲಭೆಗಳು ನಡೆಯುತ್ತಿವೆ. ಪಾಕ್ ಪರ ಘೋಷಣೆ ಪ್ರಕರಣದಲ್ಲಿ ಸರಕಾರ ಮತಕ್ಕಾಗಿ ಅವರ ಮೇಲೆ ಕ್ರಮ ತೆಗೆದುಕೊಳ್ಳುವುದಿಲ್ಲ. ಪ್ರಕರಣ ಮುಚ್ಚಿ ಹಾಕಿದ್ದಾರೆ’ ಎಂದು ಅಶೋಕ್ ದೂರಿದರು.

ಸರಕಾರ ಎಫ್‍ಎಸ್‍ಎಲ್ ವರದಿಯನ್ನೂ ತಿರುಚುವ ಪ್ರಯತ್ನ ಮಾಡಲಿದೆ. ಸರಕಾರ ಜನ ವಿರೋಧಿ ನೀತಿಯನ್ನು ಅನುಸರಿಸುತ್ತಿದೆ. ಬೇರೆ ಯಾವುದೇ ಸರಕಾರ ಇದ್ದಿದ್ದರೆ ಸಿಎಂ ರಾಜೀನಾಮೆ ಕೊಡುತ್ತಿದ್ದರು. ವಿಧಾನಸೌಧವನ್ನು ಸ್ಲೀಪರ್ ಸೆಲ್ ಮಾಡಲು ಹೊರಟಿದ್ದಾರೆ. ಈ ಸರಕಾರವನ್ನು ಕಿತ್ತೊಗೆಯಬೇಕು ಎಂದು ರಾಜ್ಯಪಾಲರಿಗೆ ಮನವಿ ಮಾಡಿದ್ದೇವೆ ಎಂದು ಅವರು ತಿಳಿಸಿದರು.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News