ವಿದ್ಯುತ್ ಕಳ್ಳತನ ಒಪ್ಪಿಕೊಂಡ ಕುಮಾರಸ್ವಾಮಿಗೆ ಅಭಿನಂದನೆ: ಡಿಸಿಎಂ ಡಿ.ಕೆ.ಶಿವಕುಮಾರ್

Update: 2023-11-14 09:21 GMT

ಬೆಂಗಳೂರು: “ಅಚಾತುರ್ಯವೋ, ಕಳ್ಳತನವೋ ಒಟ್ಟಿನಲ್ಲಿ ವಿದ್ಯುತ್ ಕಳ್ಳತನದ ಬಗ್ಗೆ ಕುಮಾರಸ್ವಾಮಿ ಅವರು ಒಪ್ಪಿಕೊಂಡು, ದಂಡ ಕಟ್ಟುತ್ತೇನೆ ಎಂದು ಹೇಳಿರುವುದು ಅಭಿನಂದನೀಯ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಹೇಳಿದ್ದಾರೆ.

"ಕುಮಾರಸ್ವಾಮಿ ಅವರು ಮನೆಗೆ ಅಕ್ರಮವಾಗಿ ವಿದ್ಯುತ್ ಸಂಪರ್ಕ ಮಾಡಿಕೊಂಡಿದ್ದಾರೆ" ಎಂಬ ಬಗ್ಗೆ ಮಾಧ್ಯಮಗಳ ವರದಿ ಹಾಗೂ ಕಾಂಗ್ರೆಸ್ ಪಕ್ಷದ 'ಎಕ್ಸ್' ಖಾತೆಯಲ್ಲಿ ಮಾಡಿರುವ ಆರೋಪ ಕುರಿತು ಮಾಧ್ಯಮಗಳ ಪ್ರಶ್ನೆಗಳಿಗೆ ವಿಧಾನಸೌಧ ಹಾಗೂ ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿ ಬಳಿ ಡಿಸಿಎಂ ಡಿ‌.ಕೆ.ಶಿವಕುಮಾರ್ ಅವರು ಮಂಗಳವಾರ ಈ ರೀತಿ ಉತ್ತರಿಸಿದರು.

"ಕುಮಾರಸ್ವಾಮಿ ಮನೆಗೆ ವಿದ್ಯುತ್ ಕಳವು ವಿಚಾರವನ್ನು ಮಾಧ್ಯಮಗಳಲ್ಲಿ ಗಮನಿಸಿದೆ. ಅವರ ನೆರೆಹೊರೆಯವರೇ ಅಕ್ರಮ ವಿದ್ಯುತ್ ಸಂಪರ್ಕದ ವಿಡಿಯೋ ಮಾಡಿ ಮಾಧ್ಯಮಗಳಿಗೆ ನೀಡಿದ್ದಾರೆ. ಆನಂತರ ನಮ್ಮ ಪಕ್ಷದ ಸಾಮಾಜಿಕ ಜಾಲತಾಣ ಘಟಕ ಏನು ಕೆಲಸ ಮಾಡಬೇಕೊ ಅದನ್ನು ಮಾಡಿದೆ. ಅವರ ಪಕ್ಷದ ಸೋಶಿಯಲ್ ಮೀಡಿಯಾದಲ್ಲಿ ಬೇಕಾದಷ್ಟು ಬರೆದಂತೆ, ನಮ್ಮ ಪಕ್ಷದವರು ಏನು ಕೆಲಸ ಮಾಡಬೇಕೋ ಅದನ್ನು ಮಾಡಿದ್ದಾರೆ. ಅವರು ಮಾಡೋದನ್ನು ನೋಡಿಕೊಂಡು ಸುಮ್ಮನೆ ಕುಳಿತುಕೊಳ್ಳಲು ಆಗುತ್ತದೆಯೇ?” ಎಂದು ಮರುಪ್ರಶ್ನಿಸಿದರು.

Tags:    

Writer - ವಾರ್ತಾಭಾರತಿ

contributor

Editor - Navaz

contributor

Byline - ವಾರ್ತಾಭಾರತಿ

contributor

Similar News