ಬಿಜೆಪಿಯ 66 ಶಾಸಕರಲ್ಲಿ ಒಬ್ಬರಿಗೂ ಯೋಗ್ಯತೆ ಇಲ್ಲವೇ?: ವಿಪಕ್ಷ ನಾಯಕನ ಆಯ್ಕೆ ವಿಳಂಬಕ್ಕೆ ಕಾಂಗ್ರೆಸ್‌ ಕಿಡಿ

Update: 2023-07-15 12:28 GMT

ಬೆಂಗಳೂರು: ಸರ್ಕಾರ ರಚನೆಯಾಗಿ ಎರಡು ತಿಂಗಳು ಕಳೆದರೂ ಇನ್ನೂ ವಿಪಕ್ಷ ನಾಯಕನನ್ನು ಆಯ್ಕೆ ಮಾಡದಿರುವ ಕುರಿತು ಕಾಂಗ್ರೆಸ್‌ ಪ್ರತಿಪಕ್ಷ ಬಿಜೆಪಿಗೆ ಹಲವು ಪ್ರಶ್ನೆಗಳನ್ನು ಕೇಳಿದೆ. 

ಚುನಾವಣೆ ಮುಗಿದು, ಸರ್ಕಾರ ರಚನೆಯಾಗಿ 2 ತಿಂಗಳಾದರೂ ವಿರೋಧ ಪಕ್ಷದ ನಾಯಕನನ್ನು ಆಯ್ಕೆ ಮಾಡಲಾಗದಿರುವುದಕ್ಕೆ ಕಾರಣಗಳೇನು ಎಂದು ಪ್ರಶ್ನಿಸಿ ಕಾಂಗ್ರೆಸ್‌ ಟ್ವೀಟ್‌ ಮಾಡಿದೆ. 

ಬಿಜೆಪಿಗೆ ಕಾಂಗ್ರೆಸ್‌ ಕೇಳಿದ ಪ್ರಶ್ನೆಗಳು:

ರಾಜ್ಯ ಬಿಜೆಪಿಯ ಬಗ್ಗೆ ಹೈಕಮಾಂಡಿನ ತಿರಸ್ಕಾರವೇ?

66 ಶಾಸಕರಲ್ಲಿ ಒಬ್ಬರಿಗೂ ಯೋಗ್ಯತೆ ಇಲ್ಲವೇ?

ಆಂತರಿಕ ಕಚ್ಚಾಟದಲ್ಲಿ ಯಾರೊಬ್ಬರನ್ನು ಆಯ್ಕೆ ಮಾಡಲಾಗದ ತೊಳಲಾಟವೇ?

ಆ ಹುದ್ದೆಯನ್ನೂ ಮಾರಾಟಕ್ಕೆ ಇಡಲಾಗಿದೆಯೇ, ಇನ್ನೂ ನಿಗದಿಪಡಿಸಿದ ಮೊತ್ತಕ್ಕೆ ಬಿಡ್ಡಿಂಗ್ ಆಗಿಲ್ಲವೇ?

ನಮ್ಮ ಸರ್ಕಾರವನ್ನು ವಿರೋಧಿಸಲು ಸಕಾರಣಗಳು ಸಿಗುವುದಿಲ್ಲ ಎಂಬ ನಿರಾಸೆಯೇ?

ಸೋಲಿನ ಅಘಾತದಿಂದ ಇನ್ನೂ ಸುಧಾರಿಸಿಕೊಂಡಿಲ್ಲವೇ?

ಶಾಸನ ಸಭೆಯ ಪಟ್ಟುಗಳು, ನೀತಿ ನಿಯಮಗಳು ತಿಳಿದಿರುವಂತ ನಾಯಕರ ಕೊರತೆಯೇ?

ಸಂತೋಷ್ vs ಯಡಿಯೂರಪ್ಪನವರ ಆಂತರಿಕ ಯುದ್ಧದ ಪರಿಣಾಮವೇ?

Tags:    

Writer - ವಾರ್ತಾಭಾರತಿ

contributor

Editor - Ashfaq

contributor

Byline - ವಾರ್ತಾಭಾರತಿ

contributor

Similar News