ಆರೆಸ್ಸೆಸ್ ಮುಖ್ಯಸ್ಥ ಮೋಹನ್ ಭಾಗವತ್ ವಿರುದ್ಧ ಕಾಂಗ್ರೆಸ್ ದೂರು

ಮೋಹನ್ ಭಾಗವತ್ | PC:PTI
ಬೆಂಗಳೂರು : ಆರೆಸ್ಸೆಸ್ ಮುಖ್ಯಸ್ಥ ಮೋಹನ್ ಭಾಗವತ್ ಶ್ರೀರಾಮ ಮಂದಿರ ನಿರ್ಮಾಣದ ನಂತರ ದೇಶಕ್ಕೆ ಸ್ವಾತಂತ್ರ್ಯ ಬಂದಿದೆ ಎಂಬ ಹೇಳಿಕೆಯನ್ನು ವಿರೋಧಿಸಿ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಎಸ್.ಮನೋಹರ್ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ದೂರು ಸಲ್ಲಿಸಿದ್ದಾರೆ.
ಸೋಮವಾರ ಈ ಕುರಿತು ಪ್ರಕಟನೆ ನೀಡಿದ ಅವರು, ಸ್ವಾತಂತ್ರ್ಯ ಹೋರಾಟಗಾರರನ್ನು ಅಪಮಾನಿಸಿರುವುದರಿಂದ ಕೂಡಲೇ ಮೋಹನ್ ಭಾಗವತ್ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದ್ದಾರೆ.
ಅವರ ಹೇಳಿಕೆಯನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಿ ದೇಶ ವಿರೋಧಿ ಹೇಳಿಕೆ ನೀಡಿರುವ ಹಿನ್ನೆಲೆಯಲ್ಲಿ ಕೂಡಲೇ ಅವರ ವಿರುದ್ಧ ದೇಶದ್ರೋಹದ ಪ್ರಕರಣವನ್ನು ದಾಖಲಿಸಿಕೊಳ್ಳಬೇಕು ಮತ್ತು ಅವರನ್ನು ಬಂಧಿಸಿ ಕಾನೂನು ಕ್ರಮವಹಿಸಬೇಕು ಎಂದು ದೂರಿನಲ್ಲಿ ಆಗ್ರಹಿಸಿದ್ದಾರೆ.
ಮೋಹನ್ ಭಾಗವತ್ ಉದ್ದೇಶಪೂರ್ವಕವಾಗಿ ದೇಶದ ಜನರನ್ನು ಅಪಮಾನಿಸಿದ್ದಾರೆ. ಹಾಗೂ ಇವರ ಹೇಳಿಕೆಯಿಂದ ದೇಶಾಭಿಮಾನಿಗಳಿಗೆ ತೀವು ನೋವು ಉಂಟಾಗಿದೆ. ಅವರ ಹೇಳಿಕೆಯನ್ನು ಆಧರಿಸಿ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದ್ದಾರೆ.