ಕಾಂಗ್ರೆಸ್ ಸರಕಾರಕ್ಕೆ ಅಧಿಕಾರದ ದರ್ಪ ನೆತ್ತಿಗೇರಿದೆ: ಬಿ.ವೈ.ವಿಜಯೇಂದ್ರ

Update: 2024-01-28 09:10 GMT

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರಕಾರಕ್ಕೆ ಎಲ್ಲೋ ಒಂದು ಕಡೆ ಅಧಿಕಾರದ ದರ್ಪ ನೆತ್ತಿಗೇರಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ರವಿವಾರ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಮಂಡ್ಯದಲ್ಲಿ ಕೆರೆಗೋಡು ಗ್ರಾಮದ ಗ್ರಾಮ ಪಂಚಾಯತ್ ವತಿಯಿಂದ ನಿರ್ಣಯಿಸಿ 100 ಅಡಿ ಎತ್ತರದ ಧ್ವಜಸ್ತಂಭ ಸ್ಥಾಪನೆ ಮಾಡಿ, ಧ್ವಜ ಹಾರಿಸಿದ ಸಂದರ್ಭದಲ್ಲಿ ಅದನ್ನು ರಾಜ್ಯ ಸರಕಾರವು ಪೊಲೀಸರ ಮೂಲಕ ದಬ್ಬಾಳಿಕೆ ಮಾಡಿ,  ಧ್ವಜ ಇಳಿಸುವ ದುಸ್ಸಾಹಸಕ್ಕೆ ಕೈಹಾಕಿದೆ ಎಂದು ಟೀಕಿಸಿದರು.

ರಾಜ್ಯದಲ್ಲಿ ಕಾನೂನು- ಸುವ್ಯವಸ್ಥೆ ಹದಗೆಡಿಸುವ ಪರಿಸ್ಥಿತಿಯನ್ನು ನಿಮ್ಮ ಸರಕಾರವೇ ನಿರ್ಮಾಣ ಮಾಡುತ್ತಿದೆ ಎಂದು ನಾನು ನೇರವಾಗಿ ಮುಖ್ಯಮಂತ್ರಿಗಳಿಗೆ ಮತ್ತು ಗೃಹ ಸಚಿವರಿಗೆ ಈ ಸಂದರ್ಭದಲ್ಲಿ ಹೇಳುತ್ತೇನೆ ಎಂದು ನುಡಿದರು. ಮಂಡ್ಯ ಜಿಲ್ಲೆಯಲ್ಲಿ ಗ್ರಾಮ ಪಂಚಾಯತ್ ನಿರ್ಣಯ ಮಾಡಿದ್ದು, ನಿಮಗೆ ಸಹಿಸಲು ಸಾಧ್ಯವಾಗದಿದ್ದರೆ ಏನು ಮಾಡಲು ಹೊರಟಿದ್ದೀರಿ ಎಂದು ಪ್ರಶ್ನಿಸಿದರು.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News