ಕನ್ನಡಿಗರು ಕೊಟ್ಟ ಪೆನ್ ತಮಿಳರಿಗೆ ಒತ್ತೆ ಇಟ್ಟ ಕಾಂಗ್ರೆಸ್ ಸರಕಾರ: ಎಚ್.ಡಿ.ಕುಮಾರಸ್ವಾಮಿ ಟೀಕೆ

Update: 2023-08-18 18:18 GMT

ಬೆಂಗಳೂರು, ಆ. 18: ‘ಜನರಿಗೆ ದುಂಬಾಲು ಬಿದ್ದು ಪೆನ್ ಕೊಡಿ, ಪೆನ್ ಕೊಡಿ ಎಂದು ಕೇಳಿದರು. ಪಾಪ. ಜನರೂ ನಂಬಿ ಪೆನ್ ಕೊಟ್ಟರು. ಈಗ ಆ ಪೆನ್ ಅನ್ನು ತೆಗೆದುಕೊಂಡು ಹೋಗಿ ತಮಿಳುನಾಡಿಗೆ ಒತ್ತೆ ಇಟ್ಟಿದ್ದಾರೆ. ರೆಡ್ ಕಾರ್ಪೆಟ್ ಹಾಕಿ ಆ ರಾಜ್ಯದ ಸಿಎಂ ಸ್ಟಾಲಿನ್‍ರಿಗೆ ಸ್ವಾಗತ ಕೊರುತ್ತಿದ್ದಾರೆ’ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. 

ಶುಕ್ರವಾರ ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ‘ನೀರು ಬಿಡಲು ಹೇಳಿದವರು ಯಾರು?, ರಾಜ್ಯ ಕಾಂಗ್ರೆಸ್ ಸರಕಾರ ಏಕಪಕ್ಷೀಯವಾಗಿ ತಮಿಳುನಾಡಿಗೆ ನೀರು ಹರಿಸಿದೆ. ಯಾರನ್ನು ಕೇಳಿ ಇವರು ನೀರು ಹರಿಸಿದ್ದಾರೆ? ಜನರನ್ನು ಕೇಳಿದ್ದಾರೆಯೇ? ಪ್ರತಿಪಕ್ಷಗಳ ಜತೆ ಚರ್ಚೆ ಮಾಡಿದ್ದಾರೆಯೇ? ಅಥವಾ ನೀರು ಬಿಡುವಂತೆ ಸರಕಾರಕ್ಕೆ ಕಾವೇರಿ ಜಲ ನಿರ್ವಹಣಾ ಪ್ರಾಧಿಕಾರ ಇಲ್ಲವೇ ಸುಪ್ರೀಂ ಕೋರ್ಟ್ ನಿರ್ದೇಶನ ಇದೆಯೇ? ಹಾಗೇನಾದರೂ ಇದ್ದರೆ ಜನತೆಗೆ ತಿಳಿಸಬೇಕು ಎಂದು ಒತ್ತಾಯ ಮಾಡಿದರು.

ಏಕಪಕ್ಷೀಯವಾಗಿ ನೀರು ಹರಿಸಿಲ್ಲ: ಕುಮಾರಸ್ವಾಮಿ ಕಾಲದಲ್ಲಿ ನೀರು ಬಿಟ್ಟಿಲ್ವಾ? ಎಂದು ಕೆಲವರು ಪ್ರಶ್ನೆ ಮಾಡುತ್ತಿದ್ದಾರೆ. ಅವರಿಗೆ ತಿಳಿವಳಿಕೆ ಕೊರತೆ ಇದೆ. ನಾನು ಸಿಎಂ ಆಗಿದ್ದಾಗ ತಮಿಳುನಾಡಿಗೆ ನೀರು ಹರಿಸಿದ್ದು ನಿಜ. ಆಗ ನಮ್ಮಲ್ಲಿ ಯಥೇಚ್ಛವಾಗಿ ನೀರು ಇತ್ತು. ಸಂಕಷ್ಟದ ಪರಿಸ್ಥಿತಿ ಇರಲಿಲ್ಲ. ದೇವೇಗೌಡರ ಕಾಲದಲ್ಲಿಯೂ ಕೇಂದ್ರದ ಮನವಿ ಹಾಗೂ ಸುಪ್ರೀಂ ಕೋರ್ಟ್ ನಿರ್ದೇಶನದ ಮೇರೆಗೆ ನೀರು ಬಿಡಲಾಗಿತ್ತು. ಏಕಪಕ್ಷೀಯವಾಗಿ ಹಿಂದಿನ ಯಾವ ಸರಕಾರವೂ ನಿರ್ಧಾರ ಕೈಗೊಂಡು ಸರ್ವಾಧಿಕಾರಿ ಮನೋಭಾವದಿಂದ ಜನರ ಸಂಕಷ್ಟ ಲೆಕ್ಕಿಸದೆ ನೆರೆ ರಾಜ್ಯಕ್ಕೆ ನೀರು ಹರಿಸಿರಲಿಲ್ಲ’ ಎಂದು ಆಕ್ರೋಶ ವ್ಯಕ್ತಪಡಿಸಿದರು.

‘ದೇವೇಗೌಡರ ಬಗ್ಗೆ ಮಾತನಾಡಬೇಕಾದರೆ ಇತಿಹಾಸ ತಿಳಿದು ಮಾತನಾಡಬೇಕು. 1962ರಿಂದ ಅವರು ಕಾವೇರಿ, ಕೃμÁ್ಣ ಸೇರಿದಂತೆ ವಿವಿಧ ನದಿ ನೀರು ಹಕ್ಕಿಗಾಗಿ ಅವರು ನಡೆಸಿದ ಹೋರಾಟವನ್ನು ತಿಳಿದು ಮಾತನಾಡಬೇಕು. ಅವರೆಂದೂ ನಮ್ಮ ರಾಜ್ಯದ ರೈತರ ಹಿತಾಸಕ್ತಿ ಕಡೆಗಣಿಸಿ ನೆರೆ ರಾಜ್ಯಕ್ಕೆ ನೀರು ಬಿಟ್ಟಿಲ್ಲ. ಅವರ ಬಗ್ಗೆ ಮಾತಾಡೋಕೆ ಯಾರಿಗೂ ನೈತಿಕತೆ ಇಲ್ಲ’ ಎಂದು ಅವರು ತಿಳಿಸಿದರು.

ಮೇಕೆದಾಟು ಎಲ್ಲಗೆ ಬಂತು?: ‘ಮೇಕೆದಾಟು ಪಾದಯಾತ್ರೆ ಮಾಡಿದರು, ಅದು ಎಲ್ಲಿಗೆ ಬಂತು? ಚಿಕನ್ ಲೆಗ್, ಮಟನ್ ಪೀಸ್ ತಿಂದು ಹೋರಾಟ ಮಾಡಿದ್ದು ಅμÉ್ಟೀ ಆಯಿತು ಅಲ್ಲಿ. ಡಿಎಂಕೆ ನಿಮ್ಮ ಮಿತ್ರಪಕ್ಷ ಅಲ್ಲವೇ? ತಮಿಳುನಾಡು ಮುಖ್ಯಾಮಂತಿ ಸ್ಟಾಲಿನ್ ನಿಮ್ಮ ಸ್ನೇಹಿತರೇ ಅಲ್ಲವೇ? ಕೊಟ್ಟು ತಗೆದುಕೊಳ್ಳುವ ಸಂಬಂಧ ಮಾಡ್ತಾ ಇದ್ದೀರಲ್ಲಾ? ಮೇಕೆದಾಟು ಮಾಡಿ ಎಂದು ಆಗ್ರಹಿಸಿದರು.

Tags:    

Writer - ವಾರ್ತಾಭಾರತಿ

contributor

Editor - Navaz

contributor

Byline - ವಾರ್ತಾಭಾರತಿ

contributor

Similar News