ರಾಜ್ಯ ಬಜೆಟ್ ಬಗ್ಗೆ ಕಾಂಗ್ರೆಸ್‌ ನಾಯಕರು ಪ್ರತಿಕ್ರಿಯಿಸಿದ್ದೇನು..?

Update: 2025-03-07 15:02 IST
ರಾಜ್ಯ ಬಜೆಟ್ ಬಗ್ಗೆ ಕಾಂಗ್ರೆಸ್‌ ನಾಯಕರು ಪ್ರತಿಕ್ರಿಯಿಸಿದ್ದೇನು..?
  • whatsapp icon

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡಿಸಿರುವ ದಾಖಲೆಯ ಬಜೆಟ್ ನಲ್ಲಿ ರಾಜ್ಯದ ಸಮಗ್ರ ಅಭಿವೃದ್ಧಿ ಹಾಗೂ ಸರ್ವ ಜನರ ಕಲ್ಯಾಣ ಕ್ಕೆ ಒತ್ತು ನೀಡಿದ್ದು, ಇದೊಂದು ಶೇ. 100 ಕ್ಕೆ 100 ರಷ್ಟು ಅಭಿವೃದ್ಧಿ ಪರ ಬಜೆಟ್ ಎಂದು ಅಲ್ಪಸಂಖ್ಯಾತರ ಕಲ್ಯಾಣ, ವಖ್ಫ್ ಹಾಗೂ ವಸತಿ ಸಚಿವ ಜಮೀರ್ ಅಹಮದ್ ಖಾನ್ ತಿಳಿಸಿದ್ದಾರೆ.

ಕೃಷಿ, ಶಿಕ್ಷಣ, ಗ್ರಾಮೀಣ ಅಭಿವೃದ್ಧಿ, ಅರೋಗ್ಯ ಕ್ಕೆ ಹೆಚ್ಚಿನ ಅನುದಾನ ಒದಗಿಸಿ ಕೈಗಾರಿಕೆ, ಪ್ರವಾಸೋದ್ಯಮ ಕ್ಕೆ ಒತ್ತು ನೀಡಲಾಗಿದೆ ಎಂದು ತಿಳಿಸಿದ್ದಾರೆ.

ಬಜೆಟ್ ನಲ್ಲಿಅಲ್ಪಸಂಖ್ಯಾತರ ಸಮುದಾಯದ ಶಿಕ್ಷಣಕ್ಕೆ ಬಜೆಟ್ ನಲ್ಲಿ ಹೆಚ್ಚು ಒತ್ತು ಕೊಟ್ಟಿರುವುದಕ್ಕೆ ಹಾಗೂ ಹತ್ತು ವರ್ಷ ಗಳಿಂದ ನೆನೆಗುದಿಗೆ ಬಿದ್ದಿದ್ದ ಕೊಳಗೇರಿ ಅಭಿವೃದ್ಧಿ ಮಂಡಳಿ ಬಡವರಿಗೆ ನಿರ್ಮಿಸುತ್ತಿರುವ 1,80,253 ಮನೆ ಪೂರ್ಣ ಗೊಳಿಸಿ ಫಲಾನುಭವಿ ವಂತಿಗೆ ತಲಾ 5 ಲಕ್ಷ ಸರ್ಕಾರ ಭರಿಸುವ ತೀರ್ಮಾನ ಕೈಗೊಂಡಿರು ವುದಕ್ಕೆ ಸಚಿವರು ಮುಖ್ಯಮಂತ್ರಿ ಯವರಿಗೆ ಕೃತಜ್ಞತೆ ಸಲ್ಲಿಸಿದ್ದಾರೆ.

ಹಣಕಾಸು ಸಚಿವರೂ ಆದ ಸಿದ್ದರಾಮಯ್ಯ ಅವರಿಂದು ಮಂಡಿಸಿರುವ 2025-26ನೇ ಸಾಲಿನ ಆಯವ್ಯಯ ರಾಜ್ಯದ ಸರ್ವಾಂಗೀಣ ಅಭಿವೃದ್ಧಿಗೆ ಪೂರಕವಾದ ಆಶಾದಾಯಕ ಬಜೆಟ್‌ ಆಗಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಖಾತೆ ಸಚಿವ ಈಶ್ವರ ಖಂಡ್ರೆ ಅಭಿಪ್ರಾಯಪಟ್ಟಿದ್ದಾರೆ.

16ನೇ ಬಾರಿಗೆ ದಾಖಲೆಯ ಬಜೆಟ್ ಮಂಡಿಸಿರುವ ಸಿದ್ದರಾಮಯ್ಯ ಅವರ ಈ ಬಜೆಟ್ ಸ್ವೀಟ್ 16 ಬಜೆಟ್ ಆಗಿದೆ. ಮುಖ್ಯಮಂತ್ರಿಯವರು ತಮ್ಮ ಅಪಾರ ಆರ್ಥಿಕ ಅನುಭವದಿಂದ 1 ಟ್ರಿಲಿಯನ್ ಆರ್ಥಿಕ ರಾಜ್ಯವನ್ನಾಗಿ ಕರ್ನಾಟಕವನ್ನು ರೂಪಿಸುವ ನಿಟ್ಟಿನಲ್ಲಿ ದಿಟ್ಟ ಹೆಜ್ಜೆ ಇಟ್ಟಿದ್ದಾರೆ ಎಂದು ತಿಳಿಸಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯನವರು 16ನೇ ಬಾರಿಗೆ ಮಂಡಿಸಿರುವ ಬಜೆಟ್ ಸಾಮಾಜಿಕ ಕಳಕಳಿ ಹೊಂದಿರುವ ಕಲ್ಯಾಣ ಕಾರ್ಯಕ್ರಮಗಳು ಮತ್ತು ಆರ್ಥಿಕ ಬೆಳವಣಿಗೆಗೆ ಇಂಬು ನೀಡುವ ಕೈಗಾರಿಕಾ ಬೆಳವಣಿಗೆ ಎರಡಕ್ಕೂ ಸಮಾನ ಪ್ರಾತಿನಿಧ್ಯ ನೀಡಿರುವ ಸಮಗ್ರ ದೃಷ್ಟಿಕೋನದ ಬಜೆಟ್ ಆಗಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಹೇಳಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಅಭಿನಂದನೆ ಸಲ್ಲಿಸುತ್ತೇನೆ. 16ನೇ ದಾಖಲೆ ಬಜೆಟ್‌ ಮಂಡಿಸಿದ್ದಾರೆ. ಕರ್ನಾಟಕದಲ್ಲಿ ಎಲ್ಲರನ್ನೂ ಒಳಗೊಂಡ ಸಮಗ್ರವಾದ ಬಜೆಟ್‌ ಮಾಡುತ್ತಿರುವುದು ವಿಶೇಷ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ತಿಳಿಸಿದ್ದಾರೆ.

ಕರ್ನಾಟಕ ಭವಿಷ್ಯದ ದಿಕ್ಸೂಚಿ: ‘2025-26ನೇ ಸಾಲಿನ ಈ ಆಯವ್ಯಯವು ಕರ್ನಾಟಕದ ಭವಿಷ್ಯದ ದಿಕ್ಸೂಚಿಯಾಗಿದೆ. ಜನ ಕೇಂದ್ರೀತ ಅಭಿವೃದ್ಧಿಯ ಮಾದರಿಯನ್ನು ಅಳವಡಿಸಿಕೊಂಡಿರುವ ನಮ್ಮ ಸರಕಾರವು ಸಾಮಾಜಿಕ ಬಲವರ್ಧನೆಯ ಮೂಲಕ ಆರ್ಥಿಕ ಸುಸ್ಥಿರತೆಯನ್ನು ಸಾಧಿಸುವಲ್ಲಿ ಮುನ್ನುಗ್ಗುತ್ತಿದೆ. ಸಾಮಾಜಿಕ ಹಾಗೂ ಆರ್ಥಿಕ ಪ್ರಗತಿಪರತೆಯನ್ನು ಪ್ರತಿಪಾದಿಸುವ ಕರ್ನಾಟಕ ಮಾದರಿಗೆ ದೇಶದಲ್ಲಷ್ಟೇ ಅಲ್ಲ, ಜಾಗತಿಕವಾಗಿಯೂ ಮನ್ನಣೆ ದೊರಕಿದೆ’ ಎಂದು ಗ್ರಾಮೀಣಾಭಿವೃದ್ಧಿ ಸಚಿವ -ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.

ದೂರದೃಷ್ಟಿಯ ಬಜೆಟ್: ‘ಸಿಎಂ ಸಿದ್ದರಾಮಯ್ಯ ಮಂಡಿಸಿರುವ ಬಜೆಟ್ ನಿಜಕ್ಕೂ ದೂರದೃಷ್ಟಿಯುಳ್ಳ ಬಜೆಟ್ ಆಗಿದೆ. ಏಕೆಂದರೆ ಈ ಬಜೆಟ್ ಆಶಾದಾಯಕ ಮಾತ್ರವಲ್ಲ ಸರ್ಣವಾಂಗೀಣ ಅಭಿವೃದ್ಧಿಗೆ ಪೂರಕವಾಗಿದೆ. ವೈದ್ಯಕೀಯ ಶಿಕ್ಷಣ ಇಲಾಖೆ, ಕೌಶಲ್ಯಾಭಿವೃದ್ಧಿ ಇಲಾಖೆಗೂ ಹೆಚ್ಚುವರಿ ಕೊಡುಗೆಗಳನ್ನು ನೀಡಿದ್ದಾರೆ. ಎಲ್ಲ ಇಲಾಖೆಗಳಿಗೂ ಸಿದ್ದರಾಮಯ್ಯ ಅವರು ಅನುದಾನ ಹಂಚಿಕೆ ಮಾಡುವ ಮೂಲಕ ಸಮಗ್ರ ಅಭಿವೃದ್ಧಿ ದೃಷ್ಟಿಕೋನ ಹೊಂದಿದ್ದಾರೆ. ಕಲ್ಯಾಣ ಕರ್ನಾಟಕ ಭಾಗದ ಜಿಲ್ಲೆಗಳಿಗೆ ಈ ಬಾರಿಯ ಬಜೆಟ್‍ನಲ್ಲಿ ಹೆಚ್ಚಿನ ಕೊಡುಗೆಗಳು ನೀಡಲಾಗಿದೆ’ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣ್ ಪ್ರಕಾಶ್ ಪಾಟೀಲ್ ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - jafar sadik

contributor

Byline - ವಾರ್ತಾಭಾರತಿ

contributor

Similar News