ಜು.18ಕ್ಕೆ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ

Update: 2024-07-15 14:06 GMT

ಬೆಂಗಳೂರು : ವಿಧಾನ ಮಂಡಲ ಅಧಿವೇಶನದ ಹಿನ್ನೆಲೆಯಲ್ಲಿ ಜು.18ರ ಸಂಜೆ 6:30ಕ್ಕೆ ನಗರದ ಅರಮನೆ ರಸ್ತೆಯಲ್ಲಿ ಹೊಟೇಲ್ ರ್ಯಾಡಿಸನ್ ಬ್ಲೂ(ಎಟ್ರಿಯಾ)ನಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಕರೆಯಲಾಗಿದೆ.

ಶಾಸಕಾಂಗ ಪಕ್ಷದ ನಾಯಕರೂ ಆಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಸಭೆ ನಡೆಯಲಿದ್ದು, ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಡಿಸಿಎಂ ಡಿ.ಕೆ.ಶಿವಕುಮಾರ್, ಪರಿಷತ್ತಿನ ಸಭಾ ನಾಯಕ ಎನ್.ಎಸ್.ಭೋಸರಾಜು ಸೇರಿದಂತೆ ಪಕ್ಷದ ಎಲ್ಲ ಶಾಸಕರು ಹಾಗೂ ಪರಿಷತ್ ಸದಸ್ಯರು ಪಾಲ್ಗೊಳ್ಳಲಿದ್ದಾರೆಂದು ಶಾಸಕಾಂಗ ಪಕ್ಷದ ಕಾರ್ಯದರ್ಶಿ ಅಲ್ಲಮಪ್ರಭು ಪಾಟೀಲ್ ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News