ವಿಧಾನಪರಿಷತ್ ಚುನಾವಣೆ: ಕಾಂಗ್ರೆಸ್ ಬಂಡಾಯ ಅಭ್ಯರ್ಥಿಗಳ ಉಚ್ಛಾಟನೆ

Update: 2024-05-23 16:15 GMT

ಸಾಂದರ್ಭಿಕ ಚಿತ್ರ 

ಬೆಂಗಳೂರು: ವಿಧಾನಪರಿಷತ್ತಿನ ಶಿಕ್ಷಕರು ಹಾಗೂ ಪದವೀಧರರ ಕ್ಷೇತ್ರದ 6 ಸ್ಥಾನಗಳಿಗೆ ಜೂ.3ರಂದು ನಡೆಯಲಿರುವ ಚುನಾವಣೆಯಲ್ಲಿ ಪಕ್ಷದ ಅಧಿಕೃತ ಅಭ್ಯರ್ಥಿಗಳ ವಿರುದ್ಧ ಬಂಡಾಯವಾಗಿ ಕಣಕ್ಕಿಳಿದಿರುವ ಐದು ಜನರನ್ನು ಕಾಂಗ್ರೆಸ್ ಪಕ್ಷವು ತಕ್ಷಣದಿಂದ ಜಾರಿಗೆ ಬರುವಂತೆ ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಆರು ವರ್ಷಗಳ ಕಾಲ ಉಚ್ಛಾಟನೆ ಮಾಡಿದೆ.

ನೈಋತ್ಯ ಪದವೀಧರ ಕ್ಷೇತ್ರದ ಬಂಡಾಯ ಅಭ್ಯರ್ಥಿ-ಎಸ್.ಪಿ.ದಿನೇಶ್(ಶಿವಮೊಗ್ಗ), ಬೆಂಗಳೂರು ಪದವೀಧರ ಕ್ಷೇತ್ರದ ಬಂಡಾಯ ಅಭ್ಯರ್ಥಿ-ಫರ್ಡಿನಾಂಡ್ ಲಾರೆನ್ಸ್(ಬೆಂಗಳೂರು), ನೈಋತ್ಯ ಶಿಕ್ಷಕರ ಕ್ಷೇತ್ರದ ಬಂಡಾಯ ಅಭ್ಯರ್ಥಿ -ಬಿ.ಆರ್.ನಂಜೇಶ್(ಚಿಕ್ಕಮಗಳೂರು), ಆಗ್ನೇಯ ಶಿಕ್ಷಕರ ಕ್ಷೇತ್ರದ ಬಂಡಾಯ ಅಭ್ಯರ್ಥಿಗಳಾದ ಲೋಕೇಶ್ ತಾಳಿಕಟ್ಟೆ(ಚಿತ್ರದುರ್ಗ) ಹಾಗೂ ವಿನೋದ್ ಶಿವರಾಜ್(ಬೆಂಗಳೂರು) ಅವರನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸೂಚನೆ ಮೇರೆಗೆ ಉಚ್ಚಾಟಿಸಿ ಕೆಪಿಸಿಸಿ ಕಾರ್ಯಾಧ್ಯಕ್ಷ ಜಿ.ಸಿ.ಚಂದ್ರಶೇಖರ್ ಆದೇಶ ಹೊರಡಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Irshad Venur

contributor

Byline - ವಾರ್ತಾಭಾರತಿ

contributor

Similar News