ಗೋಧ್ರಾ ಹತ್ಯಾಕಾಂಡ ಪ್ರಕರಣದಲ್ಲಿ ಅಂದಿನ ಸಿಎಂ ಮೋದಿ ರಾಜೀನಾಮೆ ನೀಡಿದ್ದರೇ?: ಮಲ್ಲಿಕಾರ್ಜುನ ಖರ್ಗೆ ಪ್ರಶ್ನೆ

Update: 2024-09-27 13:34 GMT

ಮಲ್ಲಿಕಾರ್ಜುನ ಖರ್ಗೆ (PTI)

ಬೆಂಗಳೂರು: ‘ಮುಖ್ಯಮಂತ್ರಿ ಸಿದ್ದರಾಮಯ್ಯನವರು ಇವತ್ತು ಇರಬಹುದು, ನಾಳೆ ಇಲ್ಲದೆ ಇರಬಹುದು. ಆದರೆ, ಕಾಂಗ್ರೆಸ್ ಪಕ್ಷ ಮುಂದುವರಿಯುತ್ತದೆ’ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪ್ರತಿಕ್ರಿಯೆ ನೀಡಿದ್ದಾರೆ.

ಶುಕ್ರವಾರ ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮತನಾಡಿದ ಅವರು, ಮುಡಾ ನಿವೇಶನ ಹಂಚಿಕೆ ಪ್ರಕರಣದಲ್ಲಿ ಎಫ್‍ಐಆರ್ ದಾಖಲಾಗಿದೆ. ಸಿಎಂ ರಾಜೀನಾಮೆ ಕೊಡಬೇಕು ಎನ್ನುವುದಾದರೆ ಗೋಧ್ರಾ ಹತ್ಯಾಕಾಂಡ ಪ್ರಕರಣದಲ್ಲಿನ ಅಂದಿನ ಸಿಎಂ ಮೋದಿ ರಾಜೀನಾಮೆ ನೀಡಿದ್ದರೇ? ಅಮಿತ್ ಶಾ ವಿರುದ್ಧವೂ ಸಾಕಷ್ಟು ಪ್ರಕರಣಗಳಾಗಿವೇ, ಅವರು ರಾಜೀನಾಮೆ ನೀಡಿದ್ದರೇ?’ ಎಂದು ಖಾರವಾಗಿ ಪ್ರಶ್ನಿಸಿದರು.

ಯಾರನ್ನಾದರೂ ವೈಯುಕ್ತಿಕವಾಗಿ ಗುರಿ ಮಾಡುವುದು ಸರಿಯಲ್ಲ. ಸಿದ್ದರಾಮಯ್ಯ ಅವರ ಚಾರಿತ್ಯವಧೆ ಮಾಡಿದರೆ ಅದರಿಂದ ಕಾಂಗ್ರೆಸ್ ಪಕ್ಷಕ್ಕೂ ಹಾನಿಯಾಗುತ್ತದೆ. ಹೀಗಾಗಿ ಪ್ರತಿಪಕ್ಷ ಬಿಜೆಪಿ ಹಾಗೂ ಜೆಡಿಎಸ್‍ನವರು ಸೇರಿ ಕಾಂಗ್ರೆಸ್ ಪಕ್ಷಕ್ಕೆ ಹಾನಿ ಮಾಡಲು ಮುಂದಾಗಿದ್ದಾರೆ ಎಂದು ಅವರು ಟೀಕಿಸಿದರು.

ಕಾಂಗ್ರೆಸ್ ಪಕ್ಷದ ಮತಬ್ಯಾಂಕ್ ಹಾಳು ಮಾಡಲಿಕ್ಕೆ ಬಿಜೆಪಿಯವರು ಇದನ್ನೆಲ್ಲಾ ಮಾಡುತ್ತಿದ್ದಾರೆ. ಕಾನೂನು ತನ್ನದೇ ಆದ ಕ್ರಮಗಳನ್ನು ಕೈಗೊಳ್ಳುತ್ತದೆ. ಪರಿಸ್ಥಿತಿ ಏನು ಬರುತ್ತದೆ ಅನ್ನೋದನ್ನು ಪರಿಶೀಲಿಸುತ್ತದೆ. ಏನೂ ಇಲ್ಲದಿದ್ದರೂ ಪ್ರತಿದಿನ ಮುಡಾ, ಮುಡಾ ಎಂದು ಬಿಜೆಪಿ ಮುಖಂಡರು ಗುಲ್ಲೆಬ್ಬಿಸುತ್ತಿದ್ದಾರೆಂದು ಲೇವಡಿ ಮಾಡಿದರು.

ನಾವು ಸಿದ್ದರಾಮಯ್ಯ ಅವರ ಜೊತೆ ನಿಂತಿದ್ದೇವೆ. ಅವರಿಗೆ ಬೆಂಬಲ ಕೊಟ್ಟಿದ್ದೇವೆ. ಏಕೆಂದರೆ ಅವರು ಕಾಂಗ್ರೆಸ್ ಪಕ್ಷವನ್ನು ಪ್ರತಿನಿಧಿಸುತ್ತಿದ್ದಾರೆ. ಇದು ಅವರ ವೈಯುಕ್ತಿಕ ವಿಚಾರವಲ್ಲ ಎಂದ ಖರ್ಗೆ, ‘ಪ್ರಧಾನಿ ಮೋದಿ ದಲಿತರಿಗೆ ಮೀಸಲಿಟ್ಟ ಹಣವನ್ನು ಇತರ ಉದ್ದೇಶಕ್ಕೆ ಬಳಕೆ ಮಾಡಿರುವ ಬಗ್ಗೆ ಹರಿಯಾಣದಲ್ಲೇ ಉತ್ತರ ಕೊಡುತ್ತೇನೆʼ ಎಂದು ತಿರುಗೇಟು ನೀಡಿದರು.

Tags:    

Writer - ವಾರ್ತಾಭಾರತಿ

contributor

Editor - Irshad Venur

contributor

Byline - ವಾರ್ತಾಭಾರತಿ

contributor

Similar News