ಲೋಕಸಭೆ ಚುನಾವಣೆಯಲ್ಲಿ ರಾಜ್ಯದ 20 ಸ್ಥಾನಗಳಲ್ಲಿ ಕಾಂಗ್ರೆಸ್ ಗೆ ಗೆಲುವು: ಸಿಎಂ ಸಿದ್ದರಾಮಯ್ಯ ವಿಶ್ವಾಸ

Update: 2023-07-25 15:32 GMT

ಬೆಂಗಳೂರು, ಜು.25: ಮುಂದಿನ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವೂ ರಾಜ್ಯದಲ್ಲಿ 15ರಿಂದ 20 ಸ್ಥಾನಗಳನ್ನು ಗೆಲ್ಲುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಮಂಗಳವಾರ ಹಾವೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಲೋಕಸಭೆ ಚುನಾವಣೆಯಲ್ಲಿ ಜೆಡಿಎಸ್ ಹಾಗೂ ಬಿಜೆಪಿ ಒಂದಾಗುತ್ತಿರುವ ಬಗ್ಗೆ ನನಗೆ ತಿಳಿದಿಲ್ಲ. ಆದರೆ, ಮಾತುಕತೆ ನಡೆಸುತ್ತಿದ್ದಾರೆ. ಅವರು ಒಂದಾದರೆ ನಮಗೇನೂ ಭಯವಿಲ್ಲ. ನಾವು 15ರಿಂದ 20 ಸ್ಥಾನಗಳನ್ನು ಗೆದ್ದೇ ಗೆಲ್ಲುತ್ತೇವೆ ಎಂದು ತಿಳಿಸಿದರು.

ಮೊಕದ್ದಮೆ:ಗೃಹ ಲಕ್ಷ್ಮೀ ಯೋಜನೆಗೆ ಹಣ ಪಡೆದಿರುವ ಬಗ್ಗೆ ದೂರು ಹಾಗೂ ಸಾಕ್ಷಿ ಇದ್ದರೆ ಹಣ ಪಡೆದವರ ಮೇಲೆ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗುವುದು ಎಂದು ಸಿದ್ದರಾಮಯ್ಯ ಇದೇ ವೇಳೆ ಎಚ್ಚರಿಕೆ ನೀಡಿದರು.

ಸರಕಾರ ಉಳಿಸುವ ಷಡ್ಯಂತ್ರ ಗೊತ್ತಿಲ್ಲ:ಸಿದ್ದರಾಮಯ್ಯ

ಸಿಂಗಾಪುರದಲ್ಲಿ ಸರಕಾರವನ್ನು ಉರುಳಿಸಲು ಷಡ್ಯಂತ್ರ ನಡೆದಿರುವ ಬಗ್ಗೆ ನನಗೆ ಗೊತ್ತಿಲ್ಲ. ಹೇಳಿಕೆ ನೀಡಿರುವ ಡಿ.ಕೆ.ಶಿವಕುಮಾರ್ ಅವರನ್ನೆ ಕೇಳಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

Tags:    

Writer - ವಾರ್ತಾಭಾರತಿ

contributor

Editor - Navaz

contributor

Byline - ವಾರ್ತಾಭಾರತಿ

contributor

Similar News