ಕಾಂಗ್ರೆಸ್‌ ನ 4ನೇ ʼಗ್ಯಾರಂಟಿʼ | ಗೃಹಲಕ್ಷ್ಮಿ ಯೋಜನೆಗೆ ಚಾಲನೆ

Update: 2023-08-31 06:19 GMT

ಮೈಸೂರು: ರಾಜ್ಯ ಸರ್ಕಾರದ ಮಹತ್ವಕಾಂಕ್ಷೆ ಐದು ಗ್ಯಾರಂಟಿ ಯೋಜನೆಗಳ ನಾಲ್ಕನೇ ಗೃಹಲಕ್ಷ್ಮಿ ಯೋಜನೆಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಸಂಸದ ಹಾಗೂ ಎಐಸಿಸಿ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸಮ್ಮುಖದಲ್ಲಿ ಬುಧವಾರ ರಾಜ್ಯಸಭಾ ವಿರೋಧಪಕ್ಷದ ನಾಯಕ ಹಾಗೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಗೃಹಲಕ್ಷ್ಮಿ ಖಾತೆಗೆ ಬಟನ್ ಹೊತ್ತಿ 2 ಸಾವಿರ ರೂ. ಚೆಕ್ ಗೆ ಪುಷ್ಪಾರ್ಚನೆ ಮಾಡುವ ಮೂಲಕ ವಿದ್ಯುಕ್ತವಾಗಿ ಚಾಲನೆ ನೀಡಿದರು.

ನಗರದ ಮಹರಾಜ ಕಾಲೇಜು ಮೈದಾನದಲ್ಲಿ ಹಾಕಲಾಗಿದ್ಧ ಭವ್ಯ ಅದ್ದೂರಿ ವೇದಿಕೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಜ್ಯೋತಿ ಬೆಳಗುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಲಾಯಿತು. ಬಳಿಕ ಸಮಾಜ ಕಲ್ಯಾಣ ಸಚಿವ ಹಾಗೂ ಮೈಸೂರಿ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ಸಂವಿಧಾನ ಪೀಠಿಕೆಯನ್ನು ಓದಿದರು.‌

ರಾಜ್ಯಸಭಾ ಸದಸ್ಯ ಹಾಗೂ ಎಐಸಿಸಿ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಗೃಹಲಕ್ಷ್ಮಿಯರ ಖಾತೆಗೆ ನೇರ ಹಣ ವರ್ಗಾವಣೆ ಮಾಡಿದರು.

ರಾಜ್ಯಸಭಾ ಸದಸ್ಯರುಗಳು ಹಾಗೂ ರಾಜ್ಯ ಕಾಂಗ್ರೆಸ್ ಉಸ್ತುವಾರಿಗಳಾದ ಕೆ‌.ಸಿ.ವೇಣುಗೋಪಾಲ್, ರಣದೀಪ್ ಸಿಂಗ್ ಸುರ್ಜೇವಾಲ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಗೃಹ ಸಚಿವ ಡಾ.ಜಿ‌ಪರಮೇಶ್ವರ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್, ಸಮಾಜ ಕಲ್ಯಾಣ ಸಚಿವ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪ, ಕೃಷಿ ಸಚಿವ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಚಲುವರಾಯಸ್ವಾಮಿ, ಪಶುಸಂಗೋಪನಾ ಹಾಗೂ ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ಸಚಿವ ಕೆ.ವೆಂಕಟೇಶ್, ಸಣ್ಣ ನೀರಾವರಿ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಬೋಸರಾಜು, ಕಂದಾಯ ಸಚಿವ ಕೃಷ್ಣ ಭೈರೇಗೌಡ, ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್, ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ, ಆಹಾರ ಸಚಿವ ಕೆ.ಎಚ್.ಮುನಿಯಪ್ಪ, ಸೇರಿದಂತೆ ರಾಜ್ಯ ಸಚಿವ ಸಂಪುಟದ ಸಚಿವರುಗಳು, ನಾಲ್ಕು ಜಿಲ್ಲೆಗಳ ಶಾಸಕರುಗಳು, ವಿಧಾನಪರಿಷತ್ ಸದಸ್ಯರುಗಳು ಉಪಸ್ಥಿತರಿದ್ದರು.

ಮೈಸೂರು, ಮಂಡ್ಯ, ಚಾಮರಾಜನಗರ ಮತ್ತು ಕೊಡಗು ಜಿಲ್ಲೆಗಳಿಂದ ಲಕ್ಷಾಂತರ ಮಂದಿ ಯಜಮಾನಿಯರು ತಂಡೋಪ ತಂಡವಾಗಿ ಆಗಮಿಸಿ ಗೃಹಲಕ್ಷ್ಮಿ ಯೋಜನೆಯನ್ನು ಕಣ್ತುಂಬಿಕೊಂಡರು. ಕಾರ್ಯಕ್ರಮಕ್ಕೆ ಆಗಮಿಸಿದ ಮಹಿಳೆಯರಿಗೆ ಆಯಾ ಜವಾಬ್ದಾರಿ ವಹಿಸಿಕೊಂಡಿದ್ದ ಪಿಡಿಓ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಿಬ್ಬಂದಿಗಳು, ಆಶಾ ಕಾರ್ಯಕರ್ತೆಯರು ಮತ್ತು ಅಂಗನವಾಡಿ ಕಾರ್ಯಕರ್ತೆಯರು ಯಾವುದೇ ರೀತಿ ಅನಾನುಕೂಲ ಉಂಟಾಗದಂತೆ ನೋಡಿಕೊಂಡರು.

 

 

 

ವೈಯಕ್ತಿಕವಾಗಿ ನನಗೆ ಅತೀವ ಸಂತಸವಿದೆ: ಸಿಎಂ ಟ್ವೀಟ್

ʼʼರಕ್ಷಾ ಬಂಧನದ ಈ ಶುಭ ಸಂದರ್ಭದಲ್ಲಿ ಕುಟುಂಬದ ಯಜಮಾನಿಯರಿಗೆ ‘ಗೃಹಲಕ್ಷ್ಮಿ’ ಯೋಜನೆಯ ಮೂಲಕ ಸ್ವಾವಲಂಬನೆಯ ರಕ್ಷೆಯನ್ನು ನೀಡುತ್ತಿರುವುದಕ್ಕೆ ನಮ್ಮ ಸರ್ಕಾರಕ್ಕೆ, ವೈಯಕ್ತಿಕವಾಗಿ ನನಗೆ ಅತೀವ ಸಂತಸವಿದೆʼʼ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಟ್ವೀಟ್‌ ಮಾಡಿದ್ದಾರೆ. 

ಗೃಹ ಲಕ್ಷ್ಮಿ ಯೋಜನೆಗೆ ಅರ್ಹತೆ;

ಪಡಿತರ ಚೀಟಿ ಅಥವಾ ಬಡತನ ರೇಖೆಗಿಂತ ಕೆಳಗಿರುವ (ಬಿಪಿಎಲ್) ಕಾರ್ಡ್, ಬಡತನ ರೇಖೆಗಿಂತ ಮೇಲಿನ (ಎಪಿಎಲ್) ಕಾರ್ಡ್ ಅಥವಾ ಅಂತ್ಯೋದಯ ಕಾರ್ಡ್‌ನಲ್ಲಿ ಕುಟುಂಬದ ಮುಖ್ಯಸ್ಥರ ಹೆಸರನ್ನು ನಮೂದಿಸಿರುವ ಮಹಿಳೆಯರು ಯೋಜನೆಗೆ ಅರ್ಹರಾಗಿರುತ್ತಾರೆ.ಆದಾಯ ತೆರಿಗೆ ಪಾವತಿಸುವ ಅಥವಾ ಸರಕು ಮತ್ತು ಸೇವಾ ತೆರಿಗೆ ರಿಟರ್ನ್ಸ್ ಕ್ಲೈಮ್ ಮಾಡುವ ಮಹಿಳೆ ಅಥವಾ ಆಕೆಯ ಪತಿ ಯೋಜನೆಗೆ ಅರ್ಹರಲ್ಲ ಎಂದು ಸರ್ಕಾರ ತಿಳಿಸಿದೆ.

ಗೃಹ ಲಕ್ಷ್ಮಿ ನೋಂದಣಿಗೆ ಅಗತ್ಯವಾದ ದಾಖಲೆಗಳು

1- ಆಧಾರ್ ಕಾರ್ಡ್2- ಗಂಡನ ಆಧಾರ್ ಕಾರ್ಡ್3- ಪಡಿತರ ಚೀಟಿ, ಬಿಪಿಎಲ್, ಎಪಿಎಲ್ ಅಥವಾ ಅಂತ್ಯೋದಯ ಕಾರ್ಡ್4- ಫಲಾನುಭವಿಗಳು ತಮ್ಮ ಮೊಬೈಲ್ ಸಂಖ್ಯೆಗಳನ್ನು ಆಧಾರ್‌ನೊಂದಿಗೆ ಲಿಂಕ್ ಮಾಡಬೇಕಾಗುತ್ತದೆ.

 

Tags:    

Writer - ವಾರ್ತಾಭಾರತಿ

contributor

Editor - Navaz

contributor

Byline - ವಾರ್ತಾಭಾರತಿ

contributor

Similar News