ಚಿತ್ರದುರ್ಗದ ಕವಾಡಿಗರಹಟ್ಟಿಯಲ್ಲಿ ಕಲುಷಿತ ನೀರು ಪ್ರಕರಣ: ಲೋಕಾಯುಕ್ತದಲ್ಲಿ ದೂರು ದಾಖಲು
Update: 2023-08-04 17:22 GMT
ಬೆಂಗಳೂರು, ಆ.4: ಚಿತ್ರದುರ್ಗದ ಕವಾಡಿಗರಹಟ್ಟಿಯಲ್ಲಿ ಕಲುಷಿತ ನೀರು ಸೇವನೆ ಪ್ರಕರಣದಲ್ಲಿ ಮೃತಪಟ್ಟವರ ಸಂಖ್ಯೆ 5ಕ್ಕೆ ಏರಿಕೆಯಾಗಿದ್ದು, 117ಕ್ಕೂ ಅಧಿಕ ಮಂದಿ ಅಸ್ವಸ್ಥರಾಗಿದ್ದಾರೆ. ಈ ಕುರಿತು ಚಿತ್ರದುರ್ಗದ ಎಸ್‍ಪಿ ನೀಡಿದ ದೂರಿನ ಹಿನ್ನೆಲೆಯಲ್ಲಿ ಲೋಕಾಯುಕ್ತರಿಂದ ಸ್ವಯಂಪ್ರೇರಿತ ದೂರು ದಾಖಲಾಗಿದೆ.
ಚಿತ್ರದುರ್ಗ ಲೋಕಾಯುಕ್ತ ಎಸ್‍ಪಿ ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲು ಮಾಡಿಕೊಂಡು, ಒಟ್ಟು ಏಳು ಜನ ಅಧಿಕಾರಿಗಳಿಗೆ ಲೋಕಾಯುಕ್ತ ಸಂಸ್ಥೆಯು ನೋಟಿಸ್ ನೀಡಿದೆ.
ನಗರಾಭಿವೃದ್ಧಿ ಇಲಾಖೆ ಕಾರ್ಯದರ್ಶಿ, ಪೌರಾಡಳಿತ ಇಲಾಖೆ ನಿರ್ದೇಶಕ, ಚಿತ್ರದುರ್ಗ ಡಿಸಿ, ಜಿಲ್ಲಾ ಆರೋಗ್ಯ ಅಧಿಕಾರಿ, ಮುನ್ಸಿಪಲ್ ಕೌನ್ಸಿಲ್ ಆರೋಗ್ಯ ಅಧಿಕಾರಿ, ಮುನ್ಸಿಪಲ್ ಕೌನ್ಸಿಲ್ ಆಯುಕ್ತರು ಹಾಗೂ ಸಹಾಯಕ ಕಾರ್ಯಪಾಲ ಅಭಿಯಂತರರಿಗೆ ನೋಟಿಸ್ ಜಾರಿ ಮಾಡಲಾಗಿದೆ. ಆ.24ರಂದು ವಿಚಾರಣೆಗೆ ಹಾಜರಾಗುವಂತೆ ನೋಟಿಸ್‍ನಲ್ಲಿ ಸೂಚನೆ ನೀಡಲಾಗಿದೆ.