ಬಿಜೆಪಿ ಟಿಕೆಟ್ ಸಿಗದಿದ್ದಲ್ಲಿ ಪಕ್ಷೇತರನಾಗಿ ಸ್ಪರ್ಧೆ: ಸಿ.ಪಿ.ಯೋಗೇಶ್ವರ್
Update: 2024-10-21 09:45 GMT
ಬೆಂಗಳೂರು: ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಬಿಜೆಪಿಯಿಂದ ಟಿಕೆಟ್ ಸಿಗದಿದ್ದಲ್ಲಿ ಪಕ್ಷೇತರ ಸ್ಪರ್ಧೆ ಮಾಡುವೆ ಎಂದು ವಿಧಾನ ಪರಿಷತ್ ಬಿಜೆಪಿ ಸದಸ್ಯ ಹಾಗೂ ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ಹೇಳಿದ್ದಾರೆ.
ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಯೋಗೇಶ್ವರ್, ಕಾಂಗ್ರೆಸ್ ನಿಂದ ಸ್ಪರ್ಧೆ ಮಾಡುವ ಇರಾದೆ ಹೊಂದಿಲ್ಲ. ಈ ಕ್ಷಣಕ್ಕೂ ಬಿಜೆಪಿ ಟಿಕೆಟ್ ನೀಡಿದರೆ ಸ್ಪರ್ಧೆ ಮಾಡುವೆ. ಇಲ್ಲವಾದಲ್ಲಿ ಪಕ್ಷೇತರನಾಗಿ ಸ್ಪರ್ಧಿಸುವೆ. ಏನೇ ಆಗಲಿ ಚುನಾವಣಾ ಕಣದಲ್ಲಿ ಇರುವೆ ಎಂದು ಸ್ಪಷ್ಟಪಡಿಸಿದ್ದಾರೆ.