ಮುಂದುವರಿದ ಕಾರ್ಯಾಚರಣೆ; 8 ಪಬ್‌, ಬಾರ್‌ಗಳಿಗೆ BBMP ಅಧಿಕಾರಿಗಳಿಂದ ಬೀಗ

Update: 2023-10-24 12:26 GMT

ಸಾಂದರ್ಭಿಕ ಚಿತ್ರ

ಬೆಂಗಳೂರು, ಅ.24: ನಗರದ ಕೋರಮಂಗಲದಲ್ಲಿರುವ ಬಾರ್‍ನಲ್ಲಿ ಸಂಭವಿಸಿದ ಅಗ್ನಿ ದುರಂತದ ಬಳಿಕ ಬಿಬಿಎಂಪಿ ವ್ಯಾಪ್ತಿಯಲ್ಲಿ ಪರವಾನಿಗೆ ನಿಯಮಾವಳಿ ಪಾಲಿಸದ ಸುಮಾರು 48 ಪಬ್, ಬಾರ್ ಮತ್ತು ರೆಸ್ಟೋರೆಂಟ್‍ಗಳನ್ನು ಬಿಬಿಎಂಪಿ ಅಧಿಕಾರಿಗಳು ಮುಚ್ಚಿಸಿದ್ದಾರೆ. ಈಗಾಗಲೇ 350ಕ್ಕೂ ಅಧಿಕ ಬಾರ್ ಗಳಿಗೆ ನೋಟೀಸ್ ಅನ್ನು ಜಾರಿ ಮಾಡಲಾಗಿದೆ.

ಪಾಲಿಕೆ ವ್ಯಾಪ್ತಿಯಲ್ಲಿ ಒಟ್ಟು 1,118 ಪಬ್, ಬಾರ್ ಮತ್ತು ರೆಸ್ಟೋರೆಂಟ್‍ಗಳಿಗೆ ಪರವಾನಿಗೆ ನೀಡಲಾಗಿದೆ. ಇದುವರೆಗೂ 748 ಪಬ್, ಬಾರ್ ಮತ್ತು ರೆಸ್ಟೋರೆಂಟ್‍ಗಳನ್ನು ಆರೋಗ್ಯಾಧಿಕಾರಿಗಳ ನೇತೃತ್ವದಲ್ಲಿ ತಪಾಸಣೆ ನಡೆಸಲಾಗಿದೆ. ನ್ಯೂನ್ಯತೆಗಳು ಕಂಡುಬಂದಿರುವಂತಹ ಉದ್ದಿಮೆಗಳಿಗೆ ನೋಟಿಸ್ ಜಾರಿಮಾಡಲಾಗಿದೆ. ಜೊತೆಗೆ ಪರವಾನಿಗೆ ನಿಯಮಾವಳಿ ಪಾಲಿಸದ ಉದ್ದಿಮೆಗಳನ್ನು ಸ್ಥಳದಲ್ಲೇ ಮುಚ್ಚಿಸಲಾಗಿದೆ.

ದಕ್ಷಿಣ ವಲಯದಲ್ಲಿ ಒಟ್ಟು 248 ಪೈಕಿ 96, ಪಶ್ಚಿಮ ವಲಯದಲ್ಲಿ 167 ಪೈಕಿ 141, ಪೂರ್ವ ವಲಯದಲ್ಲಿ 222 ಪೈಕಿ 141, ರಾಜರಾಜೇಶ್ವರಿನಗರ ವಲಯದಲ್ಲಿ 75 ಪೈಕಿ 56 ಪಬ್, ಬಾರ್ ಮತ್ತು ರೆಸ್ಟೋರೆಂಟ್‍ಗಳನ್ನು ತಪಾಸಣೆ ನಡೆಸಲಾಗಿದೆ. ಯಲಹಂಕ ವಲಯದಲ್ಲಿ 110 ಪೈಕಿ 72, ಮಹದೇವಪುರ ವಲಯದಲ್ಲಿ 161 ಪೈಕಿ 138, ಬೊಮ್ಮನಹಳ್ಳಿ ವಲಯದಲ್ಲಿ 101 ಪೈಕಿ 47 ಹಾಗೂ ದಾಸರಹಳ್ಳಿ ವಲಯದಲ್ಲಿ 73 ಪಬ್, ಬಾರ್ ಮತ್ತು ರೆಸ್ಟೋರೆಂಟ್‍ಗಳನ್ನು ತಪಾಸಣೆ ನಡೆಸಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - Navaz

contributor

Byline - ವಾರ್ತಾಭಾರತಿ

contributor

Similar News