ರಾಜ್ಯದಲ್ಲಿ ಮುಂದುವರೆದ ಮಳೆ, 19 ಜಿಲ್ಲೆಗಳಿಗೆ ಅಲರ್ಟ್ ಘೋಷಣೆ
ಬೆಂಗಳೂರು : ಅರಬ್ಬೀ ಸಮುದ್ರ ಮತ್ತು ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಹೆಚ್ಚಾಗಿದ್ದು, ಹವಾಮಾನ ಇಲಾಖೆ ಮುಂದಿನ 48 ಗಂಟೆಗಳಿಗೆ ಅನ್ವಯವಾಗುವಂತೆ 2 ಜಿಲ್ಲೆಗಳಿಗೆ ಆರೆಂಜ್ ಮತ್ತು 17 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದೆ.
ಮಲೆನಾಡು ಜಿಲ್ಲೆಗಳಾದ ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಕೊಡಲಾಗಿದೆ. ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಮತ್ತು ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಗದಗ, ಹಾವೇರಿ ಹಾಗು ಬಳ್ಳಾರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಹಾಸನ, ಕೊಡಗು, ಕೋಲಾರ, ರಾಮನಗರ, ತುಮಕೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಕೊಡಲಾಗಿದೆ.
ಮುಂದಿನ 48 ಗಂಟೆಗಳ ಕಾಲ ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಅತಿ ಮಳೆಯಾಗುವ ಸಾಧ್ಯತೆಯಿದೆ. ಕರಾವಳಿ ಕರ್ನಾಟಕದ ಎಲ್ಲ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ. ಬೆಳಗಾವಿ, ಧಾರವಾಡ, ಹಾವೇರಿ, ಗದಗ, ತುಮಕೂರು, ಚಿತ್ರದುರ್ಗ, ಬಳ್ಳಾರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಹಾಸನ, ಕೊಡಗು, ಕೋಲಾರ, ಚಿಕ್ಕಬಳ್ಳಾಪುರ, ರಾಮನಗರ ಜಿಲ್ಲೆಗಳಲ್ಲಿ ಹೆಚ್ಚು ಮಳೆಯಾಗುವ ಸಾಧ್ಯತೆ ಹೆಚ್ಚಿದೆ. ದಕ್ಷಿಣ ಒಳನಾಡಿನ ಹಾಗು ಉತ್ತರ ಒಳನಾಡಿನ ಉಳಿದ ಜಿಲ್ಲೆಗಳ ಬಹುತೇಕ ಸ್ಥಳಗಳಲ್ಲಿ ಸಾಧಾರಣ ಮಳೆಯಾಗುವ ಸಂಭವವಿದೆ ಎಂದು ಹವಾಮಾನ ಇಲಾಖೆ ಹೇಳಿದೆ.