ಶಿಕ್ಷಣ, ಆರೋಗ್ಯ ಕ್ಷೇತ್ರಕ್ಷೆ ಕ್ರೈಸ್ತ ಸಮುದಾಯದ ಕೊಡುಗೆ ಶ್ಲಾಘನೀಯ: ಸಿಎಂ ಸಿದ್ದರಾಮಯ್ಯ

Update: 2023-12-18 13:42 GMT

ಬೆಂಗಳೂರು: ‘ಸಾಮಾಜಿಕ ಅಸಮಾನತೆಯಿರುವ ಕಾಲಮಾನದಲ್ಲಿ ಕ್ರೈಸ್ತ ಸಮುದಾಯ ಶಿಕ್ಷಣ ಹಾಗೂ ಆರೋಗ್ಯ ಕ್ಷೇತ್ರದಲ್ಲಿನ ಸೇವೆ ಶ್ಲಾಘನೀಯವಾಗಿದೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ  ಮೆಚ್ಚಗೆ ವ್ಯಕ್ತಪಡಿಸಿದ್ದಾರೆ.

ಸೋಮವಾರ ನಗರದ ಹೆಬ್ಬಾಳದಲ್ಲಿರುವ ಬ್ಯಾಪ್ಟಿಸ್ಟ್ ಆಸ್ಪತ್ರೆಯಲ್ಲಿ ಲೀನಿಯರ್ ಆಕ್ಸರಲೇಟರ್ ರೆಡಿಯಷನ್ ಥೆರಪಿ ಸೇವೆಯನ್ನು ಉದ್ಘಾಟಿಸಿ ಮಾತನಾಡಿದ ಅವರು, ‘ಶಿಕ್ಷಣ ಹಾಗೂ ಆರೋಗ್ಯ ಕ್ಷೇತ್ರದಲ್ಲಿ ಕ್ರಿಶ್ಚಿಯನ್ ಸಮುದಾಯ ಅತ್ಯುತ್ತಮ ಕೆಲಸವನ್ನು ಮಾಡಿದೆ. ಉಡುಪಿ ಹಾಗೂ ಮಂಗಳೂರಿನಲ್ಲಿ ಗುಣಮಟ್ಟದ ಶಿಕ್ಷಣಕ್ಕೆ ಈ ಸಮುದಾಯ ಒಳ್ಳೆಯ ಬುನಾದಿಯನ್ನು ಹಾಕಿದೆ. ಭಾರತೀಯ ಸಮಾಜದಲ್ಲಿ ಬಹುಸಂಖ್ಯಾತ ಜನ ಅಕ್ಷರ ಸಂಸ್ಕೃತಿಯಿಂದ ವಂಚಿತರಾಗಿದ್ದರು ಎಂದು ಹೇಳಿದರು.

ಆಧುನಿಕ ಚಿಕಿತ್ಸಾ ಸೌಲಭ್ಯ: ಬ್ಯಾಪ್ಟಿಸ್ಟ್ ಆಸ್ಪತ್ರೆಯಲ್ಲಿ ಕ್ಯಾನ್ಸರ್ ಕಾಯಿಲೆ ಗುಣಪಡಿಸುವ ಆಧುನಿಕ ಚಿಕಿತ್ಸಾ ವಿಧಾನವಾದ ಲೀನಿಯರ್ ಆಕ್ಸರಲೇಟರ್ ರೆಡಿಯಷನ್ ಥೆರಪಿ ಸೇವೆಯನ್ನು ಉದ್ಘಾಟಿಸಲಾಗಿದೆ. ಪ್ರಥಮ ಹಂತದಲ್ಲಿ ಕ್ಯಾನ್ಸರ್ ರೋಗವನ್ನು ಪತ್ತೆ ಹಚ್ಚಿದರೆ, ರೋಗವನ್ನು ಗುಣಪಡಿಸಬಹುದು. ಕಡೆಯ ಹಂತದಲ್ಲಿ ಕ್ಯಾನ್ಸರ್ ಪತ್ತೆಯಾದಾಗ, ಕಾಯಿಲೆ ಉಲ್ಬಣಗೊಳ್ಳದಿರಲು ಈ ಅತ್ಯಾಧುನಿಕ ಚಿಕಿತ್ಸೆ ಸಹಕಾರಿ. ಈ ಆಸ್ಪತ್ರೆಗೆ ಹಳ್ಳಿಗಾಡಿನ ಜನರು ಹೆಚ್ಚು ಬರುವುದರಿಂದ ವೈದ್ಯರು ಕನ್ನಡದಲ್ಲಿ ಮಾತನಾಡುವುದರಿಂದ ರೋಗಿಗಳಿಗೆ ಹೆಚ್ಚು ಅನುಕೂಲವಾಗುತ್ತದೆ ಎಂದು ತಿಳಿಸಿದರು.

ಕೈಗೆಟಕುವ ದರದಲ್ಲಿ ಆರೋಗ್ಯ ಸೇವೆ: ಶ್ರೀಮಂತರು ಖಾಸಗಿ ಆಸ್ಪತ್ರೆಗೆ ಹೋಗುತ್ತಾರೆ. ಆದರೆ ನಿತ್ಯ ಜೀವನದಕ್ಕಾಗಿ ಹೋರಾಡುವ ಬಡಜನರಿಗೆ ಕಡಿಮೆ ದರದಲ್ಲಿ ಆರೋಗ್ಯ ಸೇವೆ ನೀಡುವ ಬ್ಯಾಪ್ಟಿಸ್ಟ್ ಆಸ್ಪತ್ರೆ ಜನಸೇವೆಯಲ್ಲಿ ನಂಬಿಕೆ ಇರಿಸಿದೆ. ಬ್ಯಾಪ್ಟಿಸ್ಟ್ ಆಸ್ಪತ್ರೆಯು ಬಡವರಿಗೆ ಕೈಗೆಟಕುವ ದರದಲ್ಲಿ ಚಿಕಿತ್ಸೆ ನೀಡುತ್ತಾ ಬಂದಿದೆ. ಸರಕಾರಿ ಆಸ್ಪತ್ರೆಯಂತೆ ಬ್ಯಾಪ್ಟಿಸ್ಟ್ ಆಸ್ಪತ್ರೆ ಬಡರೋಗಿಗಳಿಗೆ ಗುಣಮಟ್ಟದ ಚಿಕಿತ್ಸೆ ನೀಡುತ್ತಿದ್ದು, ಸರಕಾರ ಈ ಆಸ್ಪತ್ರೆಗೆ ಎಲ್ಲ ರೀತಿಯ ಸಹಕಾರವನ್ನು ನೀಡಲಿದೆ ಎಂದು ಅವರು ನುಡಿದರು.

ಕಾರ್ಯಕ್ರಮದಲ್ಲಿ ನಗರಾಭಿವೃದ್ಧಿ ಸಚಿವ ಬಿ.ಎಸ್.ಸುರೇಶ್, ಮಾಜಿ ಸಚಿವ ಆರ್.ವಿ.ದೇಶಪಾಂಡೆ, ಬ್ಯಾಪ್ಟಿಸ್ಟ್ ಆಸ್ಪತ್ರೆಯ ನಿರ್ದೇಶಕ ಡಾ.ಸ್ಪೂರ್ಜಿಯೋನ್ ಆರ್. ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News