ಮುಖ್ಯಮಂತ್ರಿ ಸಿದ್ದರಾಮಯ್ಯರ 'ಜನ ಸ್ಪಂದನ'ಕ್ಕೆ ಕ್ಷಣಗಣನೆ
Update: 2023-11-27 06:05 GMT
ಬೆಂಗಳೂರು, ನ.27: ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು(ನ.27) ನಡೆಸಲಿರುವ ಜನಸ್ಪಂದನ ಕಾರ್ಯಕ್ರಮಕ್ಕೆ ಕ್ಷಣಗಣನೆ ಆರಂಭವಾಗಿದೆ. ಬೆಳಗ್ಗೆಯಿಂದಲೇ ಅಹವಾಲು ಹಿಡಿದು ಸಾವಿರಾರು ಮಂದಿ ಜಮಾಯಿಸಿದ್ದಾರೆ.
ಇಡಿ ವ್ಯವಸ್ಥೆಯನ್ನು ಆಡಳಿತ ವಿಭಾಗದ ಉಪ ಕಾರ್ದರ್ಶಿ ಅರುಣ್ ಫುರ್ಟಾಡೊ ಮತ್ತು ಮುಖ್ಯಮಂತ್ರಿಗಳ ವಿಶೇಷ ಕರ್ತವ್ಯಾಧಿಕಾರಿ ಕೋನರೆಡ್ಡಿ ಪರಿಶೀಲನೆ ನಡೆಸುತ್ತಿದ್ದಾರೆ.
ಅಹವಾಲು ಸ್ವೀಕರಿಸಲು ಒಟ್ಟು 20 ಕೌಂಟರ್ ಸ್ಥಾಪಿಸಿದ್ದು, ಅಂಗವಿಕಲರು ಮತ್ತು ಹಿರಿಯ ನಾಗರಿಕರಿಗೆ ಎರಡು ಪ್ರತ್ಯೇಕ ಕೌಂಟರ್ ಮೀಸಲಿರಿಸಲಾಗಿದೆ. ಆಗಮಿಸುವ ನಾಗರಿಕರಿಗೆ ಕುಡಿಯುವ ನೀರು, ಆಹಾರ ಹಾಗೂ ಶೌಚಗೃಹ ಮತ್ತು ಇತರ ವ್ಯವಸ್ಥೆ ಕಲ್ಪಿಸಲಾಗಿದೆ. ಸ್ವೀಕರಿಸಿದ ಅಹವಾಲುಗಳನ್ನು ಇಲಾಖಾವಾರು ವಿಂಗಡಿಸಿ ತಂತ್ರಾಂಶದಲ್ಲಿ ದಾಖಲಿಸಿ ಅರ್ಜಿದಾರರಿಗೆ ಸ್ವೀಕೃತಿ ಪತ್ರ ನೀಡಿದ ನಂತರ ಮುಖ್ಯಮಂತ್ರಿಯವರು ಅಹವಾಲು ಆಲಿಸಿ ಪರಿಹಾರ ಸೂಚಿಸುವರು.