ಕಲಬುರಗಿ: ಕರ್ನಾಟಕದ ಈಶಾನ್ಯ ಪದವೀಧರ ಕ್ಷೇತ್ರದ ಚುನಾವಣೆಯ ಮತಗಳ ಎಣಿಕೆ ಕಾರ್ಯ ಆರಂಭ
ಕಲಬುರಗಿ: ಕರ್ನಾಟಕದ ಈಶಾನ್ಯ ಪದವೀಧರ ಕ್ಷೇತ್ರದ ಚುನಾವಣೆಯ ಮತಗಳ ಎಣಿಕೆ ಕಾರ್ಯ ಗುಲ್ಬರ್ಗಾ ವಿಶ್ವವಿದ್ಯಾಲಯ ಆವರಣದ, ಸಾದ್ವಿ ಶಿರೋಮಣಿ ಹೇಮರೆಡ್ಡಿ ಮಲ್ಲಮ್ಮ ಅಧ್ಯಯನ ಪೀಠ ಹಾಗೂ ಸಂಶೋಧನಾ ಕೇಂದ್ರದಲ್ಲಿ ಅರಂಭಗೊಂಡಿದೆ.
ಕರ್ನಾಟಕದ ಈಶಾನ್ಯ ಪದವೀಧರ ಕ್ಷೇತ್ರದಗಳಾದ ಕಲಬುರಗಿ, ಯಾದಗಿರಿ, ರಾಯಚೂರು, ಕೊಪ್ಪಳ, ಬೀದರ್, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳು ನಡೆದಿರುವ ಮತದಾನದ ಮತ ಎಣಿಕೆಗಾಗಿ ಚುನಾವಣಾಧಿಕಾರಿಗಳು ಹಾಗೂ ರಾಜಕೀಯ ಮುಖಂಡರ ಸಮ್ಮುಖದಲ್ಲಿ ಇಂದು ಬೆಳಿಗ್ಗೆ ಭದ್ರತಾ ಕೊಠಡಿ (ಸ್ಟ್ರಾಂಗ್ ರೂಮ್) ತೆರೆಯಲಾಯಿತು.
ಚುನಾವಣಾ ಅಧಿಕಾರಿ ಹಾಗೂ ಪ್ರಾದೇಶಿಕ ಆಯುಕ್ತರಾದ ಕೃಷ್ಣ ಭಾಜಪೇಯಿ, ಚುನಾವಣೆ ವೀಕ್ಷಕರಾದ ಎಂ ಮಹೇಶ್ವರ ರಾವ್, ಬೀದರ್ ಜಿಲ್ಲಾಧಿಕಾರಿ ಗೋವಿಂದರೆಡ್ಡಿ, ಯಾದಗಿರಿ ಜಿಲ್ಲಾಧಿಕಾರಿ ಸುಶೀಲಾ, ಡಿಸಿಪಿ ಕನ್ನಿಕಾ ಸಿಕ್ರಿವಾಲ್ ಕಲಬುರಗಿ ಅಪರ ಜಿಲ್ಲಾಧಿಕಾರಿ ರಾಯಪ್ಪ ಹುಣಸಗಿ, ಸಹಾಯಕ ಪ್ರಾದೇಶಿಕ ಆಯುಕ್ತ ಇಲಿಯಾಸ್ ಅಹ್ಮದ್ ಇಸಾಮದಿ ಮುಂತಾದವರು ಈ ಸಂದರ್ಭದಲ್ಲಿ ಹಾಜರಿದ್ದರು.