ವೀರೇಂದ್ರ ಹೆಗ್ಗಡೆ ವಿರುದ್ಧ ಅವಹೇಳನಕಾರಿ ಸುದ್ದಿ ಪ್ರಕಟಿಸದಂತೆ ನ್ಯಾಯಾಲಯದ ಪ್ರತಿಬಂಧಕಾದೇಶ

Update: 2023-07-21 18:18 GMT
  • ವೀರೇಂದ್ರ ಹೆಗ್ಗಡೆ

ಬೆಂಗಳೂರು, ಜು.21: ಧರ್ಮಸ್ಥಳ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅವರ ವಿರುದ್ಧ ಸಾಮಾಜಿಕ ಮಾಧ್ಯಮಗಳೂ ಸೇರಿದಂತೆ ಇನ್ನಿತರೆ ಮಾಧ್ಯಮಗಳು ಈಗಾಗಲೇ ಮಾಡಿರುವ ಅವಹೇಳನಕಾರಿ ವರದಿಗಳನ್ನು ಅಳಿಸಿ ಹಾಕುವಂತೆ ನ್ಯಾಯಾಲಯ ಆದೇಶ ನೀಡಿದೆ.

ಬೆಂಗಳೂರಿನ ಸಿಟಿ ಸಿವಿಲ್ ಕೋರ್ಟ್ ಪ್ರಧಾನ ಮತ್ತು ಸೆಷನ್ಸ್ ನ್ಯಾಯಾಲಯವು ಈ ಆದೇಶ ನೀಡಿದೆ. ಅಪರಾಧ ಪ್ರಕರಣಗಳಿಗೆ ಸಂಬಂಧಿಸಿದಂತೆ ಧರ್ಮಸ್ಥಳ ಹಾಗೂ ವೀರೇಂದ್ರ ಹೆಗ್ಗಡೆಯವರ ಹೆಸರನ್ನು ಉಲ್ಲೇಖಿಸಿ ವಿವಿಧ ಮಾಧ್ಯಮಗಳು ಸೇರಿದಂತೆ ಸಾಮಾಜಿಕ ಮಾಧ್ಯಮಗಳಲ್ಲೂ ವರದಿಗಳು ಬಿತ್ತರವಾಗಿವೆ. ಈ ಸಂಬಂಧ ನ್ಯಾಯಾಲಯಕ್ಕೆ ಶೀನಪ್ಪ ಹಾಗೂ ಮತ್ತಿತರರು ಸಲ್ಲಿಸಿರುವ ದಾವೆಯನ್ನು ವಿಚಾರಣೆ ನಡೆಸಿದ ನ್ಯಾಯಾಲಯ ಈ ಕುರಿತಂತೆ ಆದೇಶಿಸಿದೆ.

ಶ್ರೀ ಕ್ಷೇತ್ರ ಧರ್ಮಸ್ಥಳ, ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ನಡೆಸುತ್ತಿರುವಂತಹ ಸಂಸ್ಥೆಗಳು ಹಾಗೂ ಅವರ ಕುಟುಂಬಸ್ಥರ ವಿರುದ್ಧ ಸಾಮಾಜಿಕ ಜಾಲತಾಣಗಳಾದ ವಾಟ್ಸಾಪ್, ಫೇಸ್ ಬುಕ್, ಇನ್‍ಸ್ಟಾಗ್ರಾಮ್, ಯೂಟ್ಯೂಬ್ ಸೇರಿದಂತೆ ಟಿವಿ ಚಾನೆಲ್ ಹಾಗೂ ಇತರೆ ಯಾವುದೇ ರೀತಿಯ ಮಾಧ್ಯಮಗಳಲ್ಲಿ ಸೌಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಅವಹೇಳನಕಾರಿ ವರದಿ ಮಾಡಬಾರದು ಅಥವಾ ಮಾತನಾಡಬಾರದು ಎಂದು ನಿರ್ಬಂಧಿಸಿ ಆದೇಶ ನೀಡಲಾಗಿದೆ. ಇದೇ ವೇಳೆ 61 ಪ್ರತಿವಾದಿಗಳಿಗೆ ನೋಟಿಸ್ ಜಾರಿಗೊಳಿಸಲಾಗಿದ್ದು ವಿಚಾರಣೆ ಮುಂದೂಡಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - Navaz

contributor

Byline - ವಾರ್ತಾಭಾರತಿ

contributor

Similar News