ಯೋಗೇಶ್ವರ್ ಕುಟುಂಬಕ್ಕೆ ಸಂಬಂಧಿಸಿದ ಸುದ್ದಿ ಪ್ರಸಾರ ಮಾಡದಂತೆ ಕೋರ್ಟ್ ಆದೇಶ
Update: 2024-11-01 14:11 GMT
ಬೆಂಗಳೂರು: ರಾಮನಗರ ಜಿಲ್ಲೆ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸಿ.ಪಿ.ಯೋಗೇಶ್ವರ್ ಅವರ ಕುಟುಂಬಕ್ಕೆ ಸಂಬಂಧಿಸಿದಂತೆ ಯಾವುದೇ ಸುದ್ದಿ ಪ್ರಕಟಿಸದಂತೆ ನಗರದ ಸಿಟಿ ಸಿವಿಲ್ ನ್ಯಾಯಾಲಯ ಶುಕ್ರವಾರ ನಿರ್ಬಂಧ ಹೇರಿದೆ.
ಕಾಂಗ್ರೆಸ್ ಅಭ್ಯರ್ಥಿ ಸಿ.ಪಿ.ಯೋಗೇಶ್ವರ್ ಮತ್ತು ಅವರ ಪತ್ನಿ ಶೀಲಾ ಯೋಗೇಶ್ವರ್ ಮನವಿ ಮೇರೆಗೆ ವಿವಿಧ ಸುದ್ದಿವಾಹಿನಿಗಳು, ವೆಬ್‍ಸೈಟ್‍ಗಳು, ಯೂಟ್ಯೂಬ್ ವಾಹಿನಿಗಳಲ್ಲಿ ಈ ಹಿಂದೆ ಪ್ರಸಾರವಾಗಿದ್ದ ವಿಡಿಯೋಗಳು ಸ್ಥಗಿತಗೊಳಿಸುವುದು, ಸಾಮಾಜಿಕ ಜಾಲತಾಣಗಳು ಒಳಗೊಂಡಂತೆ ಎಲ್ಲ ಮಾಧ್ಯಮಗಳ ಮೇಲೆ ಕೋಟ್ ನಿರ್ಬಂಧ ವಿಧಿಸಲಾಗಿದೆ.
ಯೋಗೇಶ್ವರ್ ಕುಟುಂಬಕ್ಕೆ ಸಂಬಂಧಿಸಿದಂತೆ ಮುಂದಿನ ಆದೇಶದ ವರೆಗೆ ಯಾವುದೇ ಸುದ್ದಿ ಪ್ರಸಾರ ಮಾಡಬಾರದು ಎಂದು ನ್ಯಾಯಪೀಠ ಆದೇಶಿಸಿದೆ ಎಂದು ತಿಳಿಸಲಾಗಿದೆ.