ಕೋವಿಡ್ ಅಕ್ರಮ | ವೈದ್ಯಕೀಯ ಶಿಕ್ಷಣ ಇಲಾಖೆ ಆರ್ಥಿಕ ಸಲಹೆಗಾರ ರಘು ಜಿ.ಪಿ. ಅಮಾನತು

Update: 2024-10-07 14:45 GMT

ಸಾಂದರ್ಭಿಕ ಚಿತ್ರ

ಬೆಂಗಳೂರು : ಬಿಜೆಪಿ ಸರಕಾರದ ಅವಧಿಯಲ್ಲಿ ಪಿಪಿಇ ಕಿಟ್ ಹಾಗೂ ಇತರೆ ಔಷಧ ಸಾಮಾಗ್ರಿಗಳ ಖರೀದಿಗೆ ಸಂಬಂಧಿಸಿದ ಕೋವಿಡ್ ಹಗರಣಕ್ಕೆ ಸಂಬಂಧಪಟ್ಟಂತೆ ವೈದ್ಯಕೀಯ ಶಿಕ್ಷಣ ಇಲಾಖೆ ಆರ್ಥಿಕ ಸಲಹೆಗಾರ ಮತ್ತು ಇಲಾಖೆಯ ಜಂಟಿ ನಿಯಂತ್ರಕರೂ ಆಗಿದ್ದ ರಘು ಜಿ.ಪಿ. ಅವರನ್ನು ತಕ್ಷಣದಿಂದಲೇ ಅಮಾನತುಗೊಳಿಸಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ.

ಸೋಮವಾರ ಆರ್ಥಿಕ ಇಲಾಖೆಯ ಸರಕಾರದ ಅಧೀನ ಕಾರ್ಯದರ್ಶಿ ನೇತ್ರಪ್ರಭಾ ಎಂ.ಧಾಯಫುಲೆ ಅವರು ಆದೇಶ ಹೊರಡಿಸಿದ್ದು, ರಘು ಜಿ.ಪಿ. ಅವರು ಕರ್ತವ್ಯದಲ್ಲಿದ್ದ ವೇಳೆ ಸರಕಾರದ ಅನುಮೋದನೆ ಇಲ್ಲದೆ ಪಿಪಿಇ ಕಿಟ್ ಮತ್ತು ಇತರೆ ಸಾಮಾಗ್ರಿಗಳನ್ನು ಖರೀದಿಸಿರುವ ಹಾಗೂ ಟೆಂಡರ್ ಪ್ರಕ್ರಿಯೆಯಲ್ಲಿ ನಿಯಮ ಉಲ್ಲಂಘಿಸಿರುವ ಹಿನ್ನೆಲೆಯಲ್ಲಿ ಕ್ರಮ ಜರುಗಿಸಲಾಗಿದೆ ಎಂದು ತಿಳಿಸಲಾಗಿದೆ.

ಬಿಜೆಪಿ ಸರಕಾರದ ಅವಧಿಯಲ್ಲಿ 7ಸಾವಿರ ಕೋಟಿ ರೂ.ಗಳಿಗೂ ಹೆಚ್ಚು ಮೊತ್ತದ ಅಕ್ರಮ ನಡೆದಿದೆ ಎಂದು ಆರೋಪಿಸಿ ನ್ಯಾಯಮೂರ್ತಿ ಜಾನ್ ಮೈಕೆಲ್ ಡಿ’ ಕುನ್ಹಾ ನೇತೃತ್ವದ ಆಯೋಗವು ತನ್ನ ಮಧ್ಯಂತರ ವರದಿಯನ್ನು 2024 ಆಗಸ್ಟ್ 31ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಲ್ಲಿಸಿತ್ತು. ಆ ಹಿನ್ನೆಲೆಯಲ್ಲಿ ಅಧಿಕಾರಿಯನ್ನು ಅಮಾನತು ಮಾಡಲಾಗಿದೆ ಎಂದು ಗೊತ್ತಾಗಿದೆ.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News