ಕಾಂಗ್ರೆಸ್‌ ಸೇರುವ ಮೂಲಕ ರಾಜಕೀಯ ಭವಿಷ್ಯ ಹಾಳು ಮಾಡಿಕೊಂಡ ಸಿ.ಪಿ.ಯೋಗೇಶ್ವರ್‌ : ಆರ್‌.ಅಶೋಕ್

Update: 2024-10-23 10:36 GMT

ಸಿ.ಪಿ.ಯೋಗೇಶ್ವರ್‌/ಆರ್‌.ಅಶೋಕ್

ಬೆಂಗಳೂರು : "ಸಿ.ಪಿ.ಯೋಗೇಶ್ವರ್‌ ಕಾಂಗ್ರೆಸ್‌ ಸೇರುವ ಮೂಲಕ ತಮ್ಮ ರಾಜಕೀಯ ಭವಿಷ್ಯ ಹಾಳು ಮಾಡಿಕೊಂಡಿದ್ದಾರೆ. ಕಾಂಗ್ರೆಸ್‌ನಿಂದ ಚನ್ನಪಟ್ಟಣದಲ್ಲಿ ಸ್ಪರ್ಧಿಸಿದರೆ ಅವರಿಗೆ ಲೀಡ್‌ ದೊರೆಯುವುದಿಲ್ಲ" ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ್‌ ಹೇಳಿದರು.

ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ʼಜೆಡಿಎಸ್‌ ನಾಯಕರು ಕಾರ್ಯಕರ್ತರನ್ನು ಒಪ್ಪಿಸಿ ಸಿ.ಪಿ.ಯೋಗೇಶ್ವರ್‌ ಅವರಿಗೆ ಚನ್ನಪಟ್ಟಣ ಕ್ಷೇತ್ರದ ಟಿಕೆಟ್‌ ನೀಡಲು ತಯಾರಾಗಿದ್ದರು. ನಾನು ಸೇರಿದಂತೆ ಎಲ್ಲ ಬಿಜೆಪಿ ನಾಯಕರು ಅವರಿಗೆ ಬೆಂಬಲ ನೀಡಿದ್ದೆವು. ಅವರಿಗೆ ಟಿಕೆಟ್‌ ಸಿಗಲು ಎಲ್ಲ ಪ್ರಯತ್ನ ಮಾಡಿದ್ದೆವು. ಅವರು ಪಕ್ಷ ತೊರೆಯುವ ಮೂಲಕ ಪಕ್ಷಕ್ಕೆ ದ್ರೋಹ ಮಾಡಿದ್ದಾರೆ. ಈಗ ಬಿಜೆಪಿ-ಜೆಡಿಎಸ್‌ ಮೈತ್ರಿ ಇದೆ. ಕೋಲಾರದಲ್ಲಿ ಈ ಹಿಂದೆ ಬಿಜೆಪಿ ಗೆದ್ದಿತ್ತು. ಈ ಲೋಕಸಭಾ ಚುನಾವಣೆಯಲ್ಲಿ ಅಲ್ಲಿ ಜೆಡಿಎಸ್‌ಗೆ ಅವಕಾಶ ನೀಡಲಾಗಿದೆ. ಮಂಡ್ಯದಲ್ಲಿ ಈ ಹಿಂದೆ ಸುಮಲತಾ ಸ್ಪರ್ಧಿಸಿದ್ದರು. ಬಳಿಕ ಎಚ್‌.ಡಿ.ಕುಮಾರಸ್ವಾಮಿ ಅಲ್ಲಿ ಗೆದ್ದರು. ಇಲ್ಲಿ ಬಿಜೆಪಿ, ಜೆಡಿಎಸ್‌ ಎಂಬುದಕ್ಕಿಂತ ಎನ್‌ಡಿಎ ಗೆಲ್ಲಬೇಕು ಎಂಬ ಉದ್ದೇಶ ಇತ್ತುʼ ಎಂದರು.

ಆದರೆ ಇವೆಲ್ಲ ಮೈತ್ರಿ, ಒಗ್ಗಟ್ಟನ್ನು ಬದಿಗೆ ಸರಿಸಿ ಕಾಂಗ್ರೆಸ್‌ಗೆ ಸೇರಿರುವುದರಿಂದ ಅವರ ರಾಜಕೀಯ ಭವಿಷ್ಯ ಹಾಳಾಗಿದೆ. ಎನ್‌ಡಿಎದಲ್ಲಿ ಯೋಗೇಶ್ವರ್‌ ಅವರಿಗೆ ಹಿರಿತನವಿತ್ತು. ಈಗ ಕಾಂಗ್ರೆಸ್‌ಗೆ ಸೇರಿ ಕೊನೆಯ ಸಾಲಿನಲ್ಲಿ ನಿಂತಿದ್ದಾರೆ. ಅವರು ಕಾಂಗ್ರೆಸ್‌ಗೆ ಹೋದ ಕೂಡಲೇ ಮಣೆ ಹಾಕಿ ಕೂರಿಸುವುದಿಲ್ಲ ಎಂದರು.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News