ಉಪ ಚುನಾವಣೆ | ಚನ್ನಪಟ್ಟಣದಲ್ಲಿ ಕಾಂಗ್ರೆಸ್‌ ಅಭ್ಯರ್ಥಿಯಾಗಿ ಸಿ.ಪಿ.ಯೋಗೇಶ್ವರ್ ನಾಮಪತ್ರ ಸಲ್ಲಿಕೆ

Update: 2024-10-24 08:57 GMT

ಬೆಂಗಳೂರು : ಉಪಚುನಾವಣೆ ನಡೆಯಲಿರುವ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸಿ.ಪಿ. ಯೋಗೇಶ್ವರ್ ಅವರು ಗುರುವಾರ ನಾಮಪತ್ರ ಸಲ್ಲಿಸಿದರು.

ಚನ್ನಪಟ್ಟಣದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಿ.ಪಿ.ಯೋಗೇಶ್ವರ್ ಅವರು ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್ ಹಾಗೂ ಡಿ.ಕೆ.ಸುರೇಶ್ ನೇತೃತ್ವದಲ್ಲಿ ಬೃಹತ್ ಮೆರವಣಿಗೆ ನಡೆಸಿ, ಚನ್ನಪಟ್ಟಣ ತಹಶೀಲ್ದಾರ್ ಕಚೇರಿಯಲ್ಲಿ ತಮ್ಮ ಉಮೇದುವಾರಿಕೆ ಸಲ್ಲಿಸಿದರು.

ಚನ್ನಪಟ್ಟಣ ಕಾಂಗ್ರೆಸ್ ಅಭ್ಯರ್ಥಿ ಗೆಲ್ಲುವ ವಿಶ್ವಾಸವಿದೆ : ಸಿಎಂ

ಜನರು ಸಿ.ಪಿ.ಯೋಗೇಶ್ವರ್‌ ಅವರನ್ನು ಆಶೀರ್ವದಿಸಿ ಬೆಂಬಲಿಸುವ ನಂಬಿಕೆಯಿದೆ. ಕಾಂಗ್ರೆಸ್ ಅಭ್ಯರ್ಥಿ ದೊಡ್ಡ ಅಂತರದಲ್ಲಿ ಗೆಲ್ಲುವ ವಿಶ್ವಾಸವಿದೆ. ಚನ್ನಪಟ್ಟಣದ ಉಪಚುನಾವಣೆಯಲ್ಲಿ ಜೆಡಿಎಸ್ ನವರು ಯಾರನ್ನು ಅಭ್ಯರ್ಥಿಯನ್ನಾಗಿ ಆಯ್ಕೆ ಮಾಡುತ್ತಾರೆ ಎನ್ನುವುದು ಮುಖ್ಯವಲ್ಲ. ಸಿ.ಪಿ.ಯೋಗೇಶ್ವರ್ ಅವರು ಕಾಂಗ್ರೆಸ್ ಪಕ್ಷದಲ್ಲಿದ್ದು, ಎರಡು ಬಾರಿ ಶಾಸಕರಾಗಿದ್ದರು. ಬಿಜೆಪಿ ಹಾಗೂ ಎನ್‌ಡಿಎಯಿಂದ ಅವರಿಗೆ ಅನ್ಯಾಯವಾದ ಕಾರಣ ಅವರು ಮತ್ತೆ ಕಾಂಗ್ರೆಸ್ ಪಕ್ಷಕ್ಕೆ ಮರಳಿದ್ದಾರೆ. ಕಾಂಗ್ರೆಸ್ ಪಕ್ಷದ ಸಿದ್ಧಾಂತವವನ್ನು ಒಪ್ಪಿ ಮರಳಿ ಬಂದಿರುವ ಯೋಗೇಶ್ವರ್‌ ಅವರನ್ನು ಇಡೀ ಕಾಂಗ್ರೆಸ್ ಪಕ್ಷ ಸ್ವಾಗತಿಸಿದೆ. ಸಿ.ಪಿ.ಯೋಗೇಶ್ವರ್ ಅವರು ಕಾಂಗ್ರೆಸ್ ಪಕ್ಷದ ಅಧಿಕೃತ ಅಭ್ಯರ್ಥಿ. ಜೆಡಿಎಸ್ ಬಿಜೆಪಿಯವರು ಚನ್ನಪಟ್ಟಣ ಕ್ಷೇತ್ರಕ್ಕೆ ಯಾರನ್ನೇ ನಿಲ್ಲಿಸಿದರೂ ಕೂಡ, ಕಾಂಗ್ರೆಸ್‌ನ ಅಭ್ಯರ್ಥಿಯೇ ಗೆಲುವು ಸಾಧಿಸುವ ವಿಶ್ವಾಸವಿದೆ ಎಂದರು. 

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News