ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರ ಹೆಸರಿನಲ್ಲಿ ನಕಲಿ ಫೇಸ್‍ಬುಕ್ ಖಾತೆ ಸೃಷ್ಟಿ: ಎಫ್‍ಐಆರ್ ದಾಖಲು

Update: 2023-09-04 15:13 GMT

ಬೆಂಗಳೂರು, ಸೆ.4: ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರ ಫೋಟೋ ಮತ್ತು ಹೆಸರು ಬಳಸಿ ಸಾಮಾಜಿಕ ಜಾಲತಾಣದದಲ್ಲಿ ನಕಲಿ ಖಾತೆ ತೆರೆಯಲಾಗಿದ್ದು, ಈ ಬಗ್ಗೆ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಎಫ್‍ಐಆರ್ ದಾಖಲಾಗಿದೆ.

ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಹೆಸರಿನಲ್ಲಿ ನಕಲಿ ಫೇಸ್‍ಬುಕ್ ಖಾತೆ ತೆರೆದಿರುವ ಬಗ್ಗೆ ರಾಜ್ಯಪಾಲರ ವಿಶೇಷ ಕಾರ್ಯದರ್ಶಿ ನೀಡಿದ ದೂರಿನ ಅನ್ವಯ ಪ್ರಕರಣ ದಾಖಲಾಗಿದ್ದು, ತನಿಖೆ ಆರಂಭಿಸಲಾಗಿದೆ ಎಂದು ಸೈಬರ್ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಅಪರಿಚಿತ ವ್ಯಕ್ತಿಗಳು ರಾಜ್ಯದ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರ ಹೆಸರು ಮತ್ತು ಫೋಟೋವನ್ನು ಬಳಸಿಕೊಂಡು ನಕಲಿ ಫೇಸ್‍ಬುಕ್ ಖಾತೆ ತೆರೆದಿದ್ದಾರೆ. ಈ ಬಗ್ಗೆ ಕಾನೂನು ಕ್ರಮ ಜರುಗಿಸಬೇಕು ಎಂದು ರಾಜ್ಯಪಾಲರ ವಿಶೇಷ ಕಾರ್ಯದರ್ಶಿ ದೂರಿನಲ್ಲಿ ಹೇಳಿದ್ದಾರೆ.

ರಾಜ್ಯಪಾಲರ ನಕಲಿ ಖಾತೆಯನ್ನು ಮುಚ್ಚಿದ್ದು, ಆರೋಪಿಗಳಿಗಾಗಿ ಶೋಧ ನಡೆಸಿದ್ದಾರೆ. ಈ ಖಾತೆಯನ್ನು ದುರ್ಬಳಕೆ ಮಾಡಿಕೊಂಡು ಏನಾದರೂ ಹಣದ ಬೇಡಿಕೆ ಇಡಲಾಗಿದೆಯೇ, ಯಾರಿಗಾದರೂ ವಂಚನೆ ಎಸಗಲಾಗಿದೆಯೇ ಎಂಬ ಬಗ್ಗೆಯೂ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Navaz

contributor

Byline - ವಾರ್ತಾಭಾರತಿ

contributor

Similar News