ಮೂಕ ಜೀವಿಗಳ ಮೇಲೆ ನಡೆದಿರುವ ಕ್ರೌರ್ಯ ಖಂಡನೀಯ: ಹಸುಗಳ ಕೆಚ್ಚಲು ಕೊಯ್ದ ಪ್ರಕರಣದ ಬಗ್ಗೆ ದಿನೇಶ್‌ ಗುಂಡೂರಾವ್ ಪ್ರತಿಕ್ರಿಯೆ

Update: 2025-01-13 06:32 GMT

ಬೆಂಗಳೂರು: ಹಸುಗಳ ಕೆಚ್ಚಲು ಕತ್ತರಿಸಿದ ದುಷ್ಕೃತ್ಯದ ಬಗ್ಗೆ ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಸಾಮಾಜಿಕ ಜಾಲತಾಣ X ನಲ್ಲಿ ಪ್ರತಿಕ್ರಿಯಿಸಿದ್ದಾರೆ.

ಬೆಂಗಳೂರಿನಲ್ಲಿ ಮೂರು ಹಸುಗಳ ಕೆಚ್ಚಲು ಕತ್ತರಿಸಿದ ದುಷ್ಕರ್ಮಿಗಳ ಕೃತ್ಯ ಆಘಾತ ಹಾಗೂ ನೋವು ತರಿಸಿದೆ. ಮೂಕ ಜೀವಿಗಳ ಮೇಲೆ ನಡೆದಿರುವ ಈ ಕ್ರೌರ್ಯ ಖಂಡನೀಯ ಎಂದು ಹೇಳಿದ್ದಾರೆ.

ಮಾನವೀಯತೆ ಇರುವ ಯಾರೂ ಈ ಕೃತ್ಯವನ್ನು ಸಹಿಸಲು ಸಾಧ್ಯವಿಲ್ಲ. ಇದೊಂದು ಮಾನವೀಯತೆ ಮೀರಿದ ಕ್ರೌರ್ಯದ ಪರಮಾವಧಿ. ಈ ಕೃತ್ಯವೆಸಗಿದ ಪಾಪಿಗಳ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲೇಬೇಕು ಎಂದು ಆಗ್ರಹಿಸಿದ್ದಾರೆ.

 

Full View

Tags:    

Writer - ವಾರ್ತಾಭಾರತಿ

contributor

Editor - jafar sadik

contributor

Byline - ವಾರ್ತಾಭಾರತಿ

contributor

Similar News