ರಾಣಿ ಚೆನ್ನಮ್ಮನಿಗೆ ಪ್ರಿಯಾಂಕಾ ಗಾಂಧಿ ಹೋಲಿಕೆ ಸಲ್ಲ: ಸಿ.ಟಿ.ರವಿ

Update: 2025-01-22 20:09 IST
ರಾಣಿ ಚೆನ್ನಮ್ಮನಿಗೆ ಪ್ರಿಯಾಂಕಾ ಗಾಂಧಿ ಹೋಲಿಕೆ ಸಲ್ಲ: ಸಿ.ಟಿ.ರವಿ

ಸಿ.ಟಿ.ರವಿ 

  • whatsapp icon

ಬೆಂಗಳೂರು : ಪ್ರಿಯಾಂಕಾ ಗಾಂಧಿಯನ್ನು ಕಿತ್ತೂರು ರಾಣಿ ಚೆನ್ನಮ್ಮನಿಗೆ ಹೋಲಿಸುವ ಮೂಲಕ ಚೆನ್ನಮ್ಮಗೆ ಅಪಮಾನ ಮಾಡಲಾಗಿದೆ ಎಂದು ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಕಿಡಿಕಾರಿದ್ದಾರೆ.

ಬುಧವಾರ ನಗರದ ಮಲ್ಲೇಶ್ವರಂನಲ್ಲಿರುವ ಬಿಜೆಪಿ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಿಯಾಂಕಾ ಗಾಂಧಿಯನ್ನು ಹೊಗಳುವ ಭರದಲ್ಲಿ ಮಲ್ಲಿಕಾರ್ಜುನ ಖರ್ಗೆ ಅವರು ಮಾನಸಿಕ ಗುಲಾಮಗಿರಿ ತೋರಿಸಿದ್ದಾರೆ. ಇದು ಭಟ್ಟಂಗಿತನದ ಹೇಳಿಕೆ. ನಾಡಿನ ಜನತೆಗೆ ಮಲ್ಲಿಕಾರ್ಜುನ ಖರ್ಗೆ ಕ್ಷಮೆ ಕೋರಬೇಕು ಎಂದರು.

ಡಿ.ಕೆ.ಶಿವಕುಮಾರ್ ಸಿಎಂ ಆಗುವ ಕುರಿತು ಜೈನಗುರು ಭವಿಷ್ಯವಾಣಿ ನುಡಿದ ವಿಚಾರವಾಗಿ ಪ್ರತಿಕ್ರಿಯಿಸಿದ ಸಿ.ಟಿ.ರವಿ, ಯೋಗ ಇದ್ದರೆ ಯಾರು ಬೇಕಾದರೂ ಸಿಎಂ ಆಗಬಹುದು. ಆದರೆ, ಯೋಗ್ಯತೆ ಇದ್ದವರು ಮಾತ್ರ ಒಳ್ಳೆಯ ಮುಖ್ಯಮಂತ್ರಿ ಆಗುತ್ತಾರೆ. ಸಿಎಂ ಆಗಲು ಯೋಗ್ಯತೆ ಬೇಕು. ಎಂದು ಡಿ.ಕೆ.ಶಿವಕುಮಾರ್‌ಗೆ ತಿರುಗೇಟು ಕೊಟ್ಟರು.

ಕಾಂಗ್ರೆಸ್ ಅಧಿವೇಶನದಲ್ಲಿ ಗಾಂಧೀಜಿ ಸ್ಮರಣೆ ಮಾಡಿದ್ದಾರೆ. ಕಾಂಗ್ರೆಸ್ ವಿಸರ್ಜಿಸಿ ಎಂಬ ಗಾಂಧಿ ಮಾತನ್ನು ಅವರೆಲ್ಲ ನೆನಪಿಸಿಕೊಳ್ಳಬೇಕಿತ್ತು. ಸ್ವಾತಂತ್ರ್ಯ ನಂತರ ಕಾಂಗ್ರೆಸ್‍ನವರು ಭ್ರಷ್ಟಾಚಾರ ಮಾಡಿ ಎಂದು ಗಾಂಧಿ ಹೇಳಲಿಲ್ಲ. ಭ್ರಷ್ಟಾಚಾರಕ್ಕೆ ಸಮಾವೇಶದಲ್ಲಿ ಕಾಂಗ್ರೆಸ್‍ನವರು ಪ್ರಾಯಶ್ಚಿತ್ತ ಮಾಡಿಕೊಳ್ಳಬೇಕಿತ್ತು. ಅಂಬೇಡ್ಕರ್‌ರನ್ನು ಚುನಾವಣೆಯಲ್ಲಿ ಸೋಲಿಸಿ ಸಮಾವೇಶದಲ್ಲಿ ಜಪ ಮಾಡಿದ್ದಾರೆ. ಅಂಬೇಡ್ಕರ್‌ಗೆ ಕಾಂಗ್ರೆಸ್ ಮಾಡಿದ ಮೋಸಕ್ಕೂ ಪ್ರಾಯಶ್ಚಿತ್ತ ಮಾಡಿಕೊಳ್ಳಬೇಕಿತ್ತು ಎಂದು ಸಿ.ಟಿ.ರವಿ ಹೇಳಿದರು.

ಅಂಬೇಡ್ಕರ್ ಮನೆಯನ್ನು ಸ್ಮಾರಕ ಮಾಡಿದ್ದು ಬಿಜೆಪಿ. ಅವರ ಅಂತ್ಯಸಂಸ್ಕಾರ ಜಾಗದಲ್ಲಿ ಬಿಜೆಪಿ ಪ್ರತಿಮೆ ನಿರ್ಮಿಸುತ್ತಿದೆ. ಅಂಬೇಡ್ಕರ್ ಕರ್ಮಭೂಮಿ ಅಭಿವೃದ್ಧಿ ಪಡಿಸುತ್ತಿರುವುದು ಬಿಜೆಪಿ. ತುರ್ತು ಪರಿಸ್ಥಿತಿ ಹೇರಿದ ಇಂದಿರಾಗಾಂಧಿ, ಪ್ರಜಾಪ್ರಭುತ್ವವನ್ನು ಆಗ ಅಪಾಯಕ್ಕೆ ದೂಡಲಾಯಿತು ಎಂದು ಸಿ.ಟಿ.ರವಿ ವಾಗ್ದಾಳಿ ನಡೆಸಿದರು.

ಸಿದ್ದರಾಮಯ್ಯ ಸ್ವಾಭಿಮಾನಿ ಎಂದುಕೊಂಡಿದ್ದೆ: ಸಿದ್ದರಾಮಯ್ಯ ಎದುರೇ ಡಿಕೆಶಿ ಸಿಎಂ ಆಗಲಿ ಎಂಬ ಘೋಷಣೆ ಮೊಳಗಿಸುತ್ತಾರೆ. ಸಿದ್ದರಾಮಯ್ಯಗೆ ಇದು ದೊಡ್ಡ ಅಪಮಾನ. ಇದಕ್ಕಿಂತ ದೊಡ್ಡ ಅಪಮಾನ ಇಲ್ಲ. ಸಿದ್ದರಾಮಯ್ಯ ಸ್ವಾಭಿಮಾನಿ ಎಂದು ನಾನು ಅಂದುಕೊಂಡಿದ್ದೆ. ಅವರದ್ದು ಸ್ವಾಭಿಮಾನದ ರಾಜಕಾರಣ ಅಂದುಕೊಂಡಿದ್ದೆ. ನನ್ನಂಥವನು ಸಿಎಂ ಆಗಿ ಹೀಗೆಲ್ಲ ಆಗಿದ್ದರೆ ಒಂದು ಕ್ಷಣವೂ ನಾನು ಅಪಮಾನ ಸಹಿಸುತ್ತಿರಲಿಲ್ಲ. ಸಿದ್ದರಾಮಯ್ಯ ಅದು ಹೇಗೆ ಈ ಅಪಮಾನ ಸಹಿಸಿಕೊಂಡರೋ ಗೊತ್ತಿಲ್ಲ ಎಂದು ಸಿ.ಟಿ.ರವಿ ಟೀಕಿಸಿದರು.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News