ಸಿ.ಟಿ.ರವಿ ಆಕ್ಷೇಪಾರ್ಹ ಪದ ಬಳಕೆ ಪ್ರಕರಣದ ತನಿಖೆ ಸಿಐಡಿ ಹೆಗಲಿಗೆ : ಗೃಹ ಸಚಿವ ಜಿ.ಪರಮೇಶ್ವರ್​​

Update: 2024-12-24 06:36 GMT

ಡಾ.ಜಿ.ಪರಮೇಶ್ವರ್ | PC : PTI

ಹುಬ್ಬಳ್ಳಿ: ವಿಧಾನ ಪರಿಷತ್‌ ಸದಸ್ಯ ಸಿ.ಟಿ.ರವಿ ಅವರು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ವಿರುದ್ಧ ಆಕ್ಷೇಪಾರ್ಹ ಪದ ಬಳಕೆ ಮಾಡಿದ್ದಾರೆ ಎಂಬ ಆರೋಪ ಸಂಬಂಧ ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸಲಾಗಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್​ ತಿಳಿಸಿದರು.

ಮಂಗಳವಾರ ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, "ಸಿ.ಟಿ.ರವಿ ಅವರು ಅಶ್ಲೀಲ ಪದ ಬಳಸಿದ್ದಾರೆ ಎಂದು ಕೆಲವರು ಹೇಳುತ್ತಿದ್ದಾರೆ. ಆದರೆ, ಇನ್ನೂ ಕೆಲವರು ಸಿಟಿ ರವಿ ಅವರು ಅಶ್ಲೀಲ ಪದ ಬಳಸಿಲ್ಲ ಎಂದು ಹೇಳಿದ್ದಾರೆ. ಹೀಗಾಗಿ, ಸತ್ಯಾಸತ್ಯತೆ ತಿಳಿಯಲು ಸಿಐಡಿ ತನಿಖೆಗೆ ಆದೇಶ ಮಾಡಿದ್ದೇನೆ" ಎಂದರು.

ಸಿಟಿ ರವಿ ಪ್ರಕರಣ ಮುಗಿದ ಅಧ್ಯಾಯ ಎಂಬ  ಸಭಾಪತಿ ಬಸವರಾಜ ಹೊರಟ್ಟಿ ಹೇಳಿಕೆ ವಿಚಾರವಾಗಿ ಮಾತನಾಡಿದ ಗೃಹ ಸಚಿವರು, ಸಭಾಪತಿಗಳು ತಮ್ಮ‌ ಕೆಲಸ ತಾವು ಮಾಡುತ್ತಾರೆ. ಪೊಲೀಸರು ತಮ್ಮ ಕರ್ತವ್ಯ ನಿರ್ವಹಿಸುತ್ತಾರೆ. ಅಲ್ಲಿಯ ಸಾಧಕ‌-ಬಾಧಕಗಳನ್ನ ನೋಡಿಕೊಂಡು ಹೇಳಿಕೆ ಕೊಟ್ಟಿರಬಹುದು. ಕಾನೂನು ಪ್ರಕ್ರಿಯೆ ನಡೆಯುವಾಗ ಕೆಲವು ವಿಳಂಬವಾಗಬಹುದು. ಆದರೆ ತನಿಖೆಯನ್ನು ಸರಿಯಾಗಿ ಮಾಡಬೇಕಾಗುತ್ತದೆ ಎಂದು ತಿಳಿಸಿದರು.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News