ಮನೆಯೂಟ ಕೋರಿ ದರ್ಶನ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ಮುಂದೂಡಿದ ಹೈಕೋರ್ಟ್‌

Update: 2024-09-09 16:25 IST
ಮನೆಯೂಟ ಕೋರಿ ದರ್ಶನ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ಮುಂದೂಡಿದ ಹೈಕೋರ್ಟ್‌

ನಟ ದರ್ಶನ್

  • whatsapp icon

ಬೆಂಗಳೂರು : ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಆರೋಪಿ ನಟ ದರ್ಶನ್ ಸಲ್ಲಿಸಿರುವ ಅರ್ಜಿ ಸಂಬಂಧ ಪ್ರಕರಣದಲ್ಲಿ ಸೂಕ್ತ ಮಾರ್ಗಸೂಚಿ ರೂಪಿಸಲಾಗುವುದು ಎಂದು ಹೈಕೋರ್ಟ್ ಅಭಿಪ್ರಾಯ ಪಟ್ಟಿದೆ.

ಮನೆ ಊಟಕ್ಕಾಗಿ ನಟ ದರ್ಶನ್ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠ ವಿಚಾರಣೆ ನಡೆಸಿತು.

ಇದೇ ವೇಳೆ ವಾದ ಮಂಡನೆಗೆ ಕಾಲಾವಕಾಶ ಕೋರಿ ದರ್ಶನ್ ಪರ ವಕೀಲರ ಮನವಿ ಹಿನ್ನೆಲೆಯಲ್ಲಿ ವಿಚಾರಣೆಯನ್ನು ಸೆ.11ಕ್ಕೆ ಹೈಕೋರ್ಟ್ ನಿಗದಿಪಡಿಸಿದೆ.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News