ನಾಳೆಯಿಂದ(ಅ.3) ರಾಜ್ಯದ ಎಲ್ಲ ಶಾಲೆಗಳಿಗೆ ‘ದಸರಾ ರಜೆ’
ಬೆಂಗಳೂರು: ನಾಳೆಯಿಂದ(ಅ.3) ಅ.20ರ ವರೆಗೆ ರಾಜ್ಯದ ಎಲ್ಲ ಶಾಲೆಗಳಿಗೆ ದಸರಾ ರಜೆ ಘೋಷಿಸಲಾಗಿದೆ.
2024-25ರ ಶೈಕ್ಷಣಿಕ ವರ್ಷದ ಶಾಲಾ ಅವಧಿಯ ಮಾರ್ಗದರ್ಶಿಯನ್ನು ಸಾರ್ವಜನಿಕ ಶಿಕ್ಷಣ ಇಲಾಖೆ, ಶಾಲೆಗಳು ಆರಂಭಕ್ಕೂ ಮುನ್ನ ಪ್ರಕಟಣೆ ಹೊರಡಿಸಿತ್ತು. ಅದರ ನಿಯಮಾನುಸಾರದಂತೆ ರಜೆಗಳು ಘೋಷಣೆಯಾಗಿವೆ. ದಸರಾ ರಜೆ ಬಳಿಕ ಅ.21ರಿಂದ 2ನೆ ಅವಧಿಯು ಪ್ರಾರಂಭವಾಗಲಿದ್ದು, 2025ರ ಎ.10ರ ತನಕ ಶಾಲೆ ನಡೆಯಲಿದೆ.
ಕ್ರಿಸ್‍ಮಸ್ ರಜೆ ಬೇಡಿಕೆ ಸಂಬಂಧಿಸಿದ ಶಿಕ್ಷಣ ಸಂಸ್ಥೆಗಳು ತಮ್ಮ ವ್ಯಾಪ್ತಿಯ ಜಿಲ್ಲಾ ಉಪನಿರ್ದೇಶಕರಿಗೆ ಸಲ್ಲಿಸಿದ್ದು, ಈ ಬಗ್ಗೆ ಆಯಾ ಉಪನಿರ್ದೇಶಕರು ಪರಿಶೀಲಿಸಿ ನಿರ್ಧರಿಸಲು ಸೂಚನೆ ನೀಡಲಾಗಿದೆ. ಡಿಸೆಂಬರ್ ತಿಂಗಳಿನಲ್ಲಿ ನೀಡುವ ಕ್ರಿಸ್‍ಮಸ್ ರಜಾ ಅವಧಿಯನ್ನು ಅಕ್ಟೋಬರ್ ತಿಂಗಳ ಮಧ್ಯಂತರ ರಜೆಯಲ್ಲಿ ಕಡಿತಗೊಳಿಸಿ ಸರಿದೂಗಿಸಿಕೊಳ್ಳಲು ಕ್ರಮವಹಿಸಲು ಸೂಚನೆ ನೀಡಲಾಗಿದೆ.
ಉಳಿದಂತೆ ನಿಗದಿತ ಶೈಕ್ಷಣಿಕ ಕರ್ತವ್ಯದ ಅವಧಿಗಳು ಕಡಿಮೆಯಾಗದಂತೆ ಅನಿರೀಕ್ಷಿತ ಕಾರಣಗಳಿಂದಾಗಿ ಶಾಲೆಗೆ ರಜೆ ಘೋಷಣೆಯಾದಲ್ಲಿ ಆ ಅವಧಿಯ ಶಾಲಾ ಕರ್ತವ್ಯದ ದಿನಗಳನ್ನು ಮುಂದಿನ ರಜಾ ದಿನಗಳಲ್ಲಿ ಪೂರ್ಣ ದಿನ ಶಾಲೆಗಳನ್ನ ನಡೆಸಿ ಶಾಲಾ ಕರ್ತವ್ಯದ ದಿನಗಳನ್ನ ಸರಿದೂಗಿಸಿಕೊಳ್ಳಲು ಸೂಚನೆ ನೀಡಲಾಗಿದೆ.