ದತ್ತಾಂಶ ಕಳವು ಪಿಡುಗನ್ನು ಮೊಳಕೆಯಲ್ಲಿ ಚಿವುಟಿ ಹಾಕಬೇಕು: ಹೈಕೋರ್ಟ್

Update: 2023-07-27 17:41 GMT

ಬೆಂಗಳೂರು, ಜು.27: ಡಿಜಿಟಲ್ ಯುಗದಲ್ಲಿ ದತ್ತಾಂಶ ಕಳವು ಒಂದು ರೋಗವಾಗಿದ್ದು, ಅದನ್ನು ಮೊಳಕೆಯಲ್ಲಿಯೇ ಚಿವುಟಿ ಹಾಕಬೇಕಾಗಿದೆ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ.

ಖಾಸಗಿ ಕಂಪೆನಿಯ ದತ್ತಾಂಶ ಕದ್ದಿದ್ದ ಮತ್ತೊಂದು ಕಂಪೆನಿ ಸೇರಿದ್ದ ಬೆಂಗಳೂರು ಮೂಲದ ಆರ್. ನವೀನ್ ಮತ್ತು ಬಿ.ಎಸ್.ಸೃಷ್ಠಿ ಎಂಬುವರ ವಿರುದ್ಧ ದಾಖಲಾಗಿದ್ದ ಪ್ರಕರಣ ರದ್ದು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ನ್ಯಾಯಪೀಠ, ಈ ಅಭಿಪ್ರಾಯ ವ್ಯಕ್ತಪಡಿಸಿದೆ.

ಅಲ್ಲದೆ, ಪ್ರಕರಣ ಸಂಬಂಧ ದಾಖಲೆಗಳನ್ನು ಪರಿಶೀಲಿಸಿದರೆ ಪ್ರಕರಣದಲ್ಲಿ ಹಲವು ಪ್ರಶ್ನೆಗಳು ಎದುರಾಗಲಿವೆ ಮತ್ತು ಈ ಹಂತದಲ್ಲಿ ಪ್ರಕರಣವನ್ನು ರದ್ದುಗೊಳಿಸಲು ಸಾಧ್ಯವಿಲ್ಲ ಎಂದು ತಿಳಿಸಿ ಅರ್ಜಿಯನ್ನು ವಜಾಗೊಳಿಸಿ ಆದೇಶಿಸಿದೆ.

ಜೊತೆಗೆ, ಅರ್ಜಿದಾರರ ಮೇಲೆ ಒಂದು ಕಂಪೆನಿಯ ದತ್ತಾಂಶ ಪಡೆದು ಅದನ್ನು ಮತ್ತೊಂದು ಎದುರಾಳಿ ಕಂಪೆನಿಯ ವ್ಯಾಪಾರ ಅಭಿವೃದ್ಧಿಗೆ ಬಳಸಿಕೊಂಡಿರುವ ಆರೋಪವಿದೆ. ಅದು ಕಂಪೆನಿಯ ಮಾಹಿತಿ ಅಥವಾ ದತ್ತಾಂಶ ಸೋರಿಕೆ ಮಾಡುವಂತಿಲ್ಲ ಎಂಬ ಒಪ್ಪಂದದ ಉಲ್ಲಂಘನೆಯಾಗಿದೆ. ಅದು ಅಪರಾಧವಾಗುತ್ತದೆ ಎಂದು ನ್ಯಾಯಪೀಠ ತನ್ನ ಆದೇಶದಲ್ಲಿ ತಿಳಿಸಿದೆ.

Tags:    

Writer - ವಾರ್ತಾಭಾರತಿ

contributor

Editor - Navaz

contributor

Byline - ವಾರ್ತಾಭಾರತಿ

contributor

Similar News