ಮುಂಗಾರು ಅಧಿವೇಶನದ ದಿನಾಂಕವನ್ನು ಸಿಎಂ ನಿರ್ಧರಿಸಲಿದ್ದಾರೆ : ಎಚ್‌.ಕೆ.ಪಾಟೀಲ್

Update: 2024-06-20 19:47 IST
ಮುಂಗಾರು ಅಧಿವೇಶನದ ದಿನಾಂಕವನ್ನು ಸಿಎಂ ನಿರ್ಧರಿಸಲಿದ್ದಾರೆ : ಎಚ್‌.ಕೆ.ಪಾಟೀಲ್
  • whatsapp icon

ಬೆಂಗಳೂರು : ವಿಧಾನ ಮಂಡಲದ ಉಭಯ ಸದನಗಳ ಮಳೆಗಾಲದ ಅಧಿವೇಶನ ನಡೆಸುವ ದಿನಾಂಕ ನಿಗದಿಪಡಿಸುವುದನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿವೇಚನೆಗೆ ಬಿಡಲಾಗಿದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ.ಪಾಟೀಲ್ ಹೇಳಿದ್ದಾರೆ.

ಗುರುವಾರ ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯ ಬಳಿಕ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಅಧಿವೇಶನ ನಡೆಸುವ ಬಗ್ಗೆ ಚರ್ಚೆಯಾಗಿದ್ದು, ದಿನಾಂಕವನ್ನು ಮುಖ್ಯಮಂತ್ರಿಗಳೇ ನಿರ್ಧರಿಸಲಿದ್ದಾರೆ ಎಂದು ತಿಳಿಸಿದರು.

ಅದೇ ರೀತಿ, ನೀಟ್ ಪರೀಕ್ಷೆಯಲ್ಲಿ ನಡೆದಿರುವ ಅಕ್ರಮದ ಕುರಿತು ಸಚಿವ ಸಂಪುಟದಲ್ಲಿ ಕಳವಳ ವ್ಯಕ್ತವಾಗಿದ್ದು, ಸರಕಾರದ ನಿಲುವನ್ನು ಉನ್ನತ ಶಿಕ್ಷಣ ಸಚಿವರು ತಿಳಿಸಲಿದ್ದಾರೆ. ಆದರೆ, ಸರಕಾರಿ ನೌಕರರಿಗೆ ವೇತನ ಹೆಚ್ಚಳ ಸಂಬಂಧದ ಏಳನೆ ವೇತನ ಆಯೋಗದ ಕುರಿತಂತೆ ಸಂಪುಟ ಸಭೆಯಲ್ಲಿ ಯಾವುದೇ ಚರ್ಚೆಯಾಗಿಲ್ಲ ಎಂದು ಅವರು ಸ್ಪಷ್ಟಪಡಿಸಿದರು.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News